Advertisement
ಶಾಸಕರ ಜತೆಗೆ ಜಿಲ್ಲಾಧಿಕಾರಿ ಅವರು ವೀಕ್ಷಣೆ ನಡೆಸಿ, ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸದಲ್ಲಿ ಸ್ವಲ್ಪ ಮಟ್ಟಿನ ಬದಲಾವಣೆಯಾಗಿದೆ. ಭೇಟಿ ದಿನ ನಡೆಸುವ ಕಾಮಗಾರಿಗಳ ಉದ್ಘಾಟನೆಯ ಸಿದ್ಧತೆಯನ್ನು ಶನಿವಾರ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಪರಿಶೀಲನೆ ನಡೆಸಿದರು.
ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆಯಲ್ಲಿ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಾಲೋಚನ ಸಭೆ ನಡೆಯಿತು. ಜಿಲ್ಲಾಧಿಕಾರಿ ಅವರು ಮುಖ್ಯಮಂತ್ರಿಗಳ ಆಗಮನ, ಸಭಾ ವೇದಿಕೆ ಆಸನ ವ್ಯವಸ್ಥೆ ಕುರಿತು ಕಂದಾಯ, ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಸಭೆಗೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪ.ಪಂ.ಗೆ ಸೂಚಿಸಿದರು. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿ, ಕಾನೂನು ಸುವ್ಯವಸ್ಥೆ, ಸ್ವತ್ಛತೆಯ ಬಗ್ಗೆ ಗಮನ ನೀಡ ಬೇಕು. ಫಲಾನುಭವಿಗಳು ಹಾಜರಿರುವಂತೆ ಎಲ್ಲ ಇಲಾಖೆಗಳು ಗಮನಿಸಬೇಕು. ಎಲ್ಲ ಇಲಾಖೆಯವರು ಒಂದೇ ತಂಡವಾಗಿ
ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಸಭೆಯಲ್ಲಿ ಪ.ಪಂ. ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಅಪರ ಜಿಲ್ಲಾಧಿಕಾರಿ ಕುಮಾರ್, ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ ಮೂರ್ತಿ, ತಹಶೀಲ್ದಾರ್ ಸಣ್ಣ ರಂಗಯ್ಯ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಬಸವರಾಜ್ ಅಯ್ಯಣ್ಣನವರ್, ಪಿಡಬ್ಲ್ಯೂಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಜಿ.ಪಂ.ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸಿ.ಆರ್. ನರೇಂದ್ರ ಮತ್ತಿತರರು ಭಾಗವಹಿಸಿದ್ದರು. ಮುಖ್ಯಮಂತ್ರಿ ಕಾರ್ಯಕ್ರಮ
ಮುಖ್ಯಮಂತ್ರಿ ಅವರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು ಜ. 7 ರಂದು ಶಿವಮೊಗ್ಗದಿಂದ ನೇರವಾಗಿ 10.40ರ ಸುಮಾರಿಗೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಅವರು ಮೊದಲಿಗೆ ಪ.ಪಂ.ನ ಕುಡಿಯುವ ನೀರಿನ ಕಾಮಗಾರಿ ಉದ್ಘಾಟಿಸಿ, ಮಿನಿ ವಿಧಾನ ಸೌಧ ಸಹಿತ ತಾಲೂಕಿನ ವಿವಿಧೆಡೆಗಳ ಸುಮಾರು 76 ಕೋ. ರೂ.ಗಳ 17 ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ತಾಲೂಕಿನ
ವಿವಿಧ ಇಲಾಖೆಗಳ ಸೌಲಭ್ಯಗಳನ್ನು 1,800 ಮಂದಿ ಫಲಾನುಭವಿಗಳಿಗೆ ವಿತರಿಸಲಿದ್ದಾರೆ.