Advertisement

ಸಿಎಂ ಭೇಟಿ: ಸಿದ್ಧತೆಗೆ ನಿರ್ದೇಶನ

10:24 AM Jul 26, 2017 | Team Udayavani |

ಬೀದರ: ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌ ಮಹಾದೇವ ಅವರು ವಿವಿಧ  ಅಧಿಕಾರಿಗಳಿಗೆ ಸೂಚಿಸಿದರು.

Advertisement

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಆಗಸ್ಟ್‌ನಲ್ಲಿ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸುವ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆಯೆ ಎಲ್ಲ ಕಾರ್ಯಕ್ರಮಗಳು ಅಂದಿನ
ದಿನವೇ ಅಚ್ಚುಕಟ್ಟಾಗಿ ನಡೆಯಬೇಕು. ಯಾವುದೇ ರೀತಿಯ ಕಿರಿಕಿರಿಗಳು ಆಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಮುಖ್ಯ ವೇದಿಕೆ ಸಕಲ ಸೌಕರ್ಯದೊಂದಿಗೆ ಸಜ್ಜಾಗುವಂತೆ ವ್ಯವಸ್ಥೆ ಮಾಡಬೇಕು. ನಗರದ ಎಲ್ಲಾ ರಸ್ತೆಗಳನ್ನು ಸರಿಪಡಿಸಬೇಕು ಎಂದು ಅವರು ಕೆಲವು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಉದ್ಘಾಟನೆ: ನಗರದಲ್ಲಿ ಹೊಸದಾಗಿ ನಿರ್ಮಾಣಗೊಂಡ 450 ಹಾಸಿಗೆಗಳ ಆಸ್ಪತ್ರೆ, 47 ಕೋಟಿ ರೂ. ವೆಚ್ಚದ ವರ್ತುಲ ರಸ್ತೆ, ನಿರಂತರ ಕುಡಿವ ನೀರಿನ ಯೋಜನೆ, ನಗರದ ಒಳ ರಸ್ತೆಗಳು, ಜನವಾಡ ಸೇರಿದಂತೆ ಕೆಲವು ಹಳ್ಳಿಗಳ ಸಂಪರ್ಕ ರಸ್ತೆಗಳು, ಕುರಿ ಮತ್ತು ಉಣ್ಣೆ ನಿಗಮದ ಕಚೇರಿ, ರೈತ ಸಂಕರ್ಪ ಕೇಂದ್ರಗಳು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಬೇಕಿದೆ ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಗಳು ನಿಯಮದಂತೆಯೇ ನಡೆಯಬೇಕು
ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು ಕಾರ್ಯಕ್ರಮದ ತಯಾರಿ ನಡೆಸಬೇಕು ಎಂದು ಸೂಚಿಸಿದರು. 

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸೆಲ್ವಮಣಿ ಆರ್‌., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಅಪರ ಜಿಲ್ಲಾಧಿಕಾರಿ ಡಾ| ಡಿ.ಷಣ್ಮುಖ, ಸಹಾಯಕ ಆಯುಕ್ತ ಶಿವಕುಮಾರ ಶೀಲವಂತ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿ ಕಾರಿಗಳು ಉಪಸ್ಥಿತರಿದ್ದರು.

Advertisement

ಕಾಮಗಾರಿಗೆ ಶಂಕುಸ್ಥಾಪನೆ
ಜಿಲ್ಲಾ ಕಚೇರಿಗಳ ಸಂಕೀರ್ಣ, ಅಮೃತ ಯೋಜನೆ, ಇಂಜಿನಿಯರಿಂಗ್‌ ಕಾಲೇಜು, 100 ಹಾಸಿಗೆಯ ಆಸ್ಪತ್ರೆ, ಜಿಲ್ಲಾ ಕ್ರೀಡಾಂಗಣ, ಗಾಂಧಿ ಭವನ, ಉದ್ಯಾನ ವನಗಳು, ಬಿದ್ರಿ ಕಲಾ ಗ್ಯಾಲರಿ, ಅಲೆಮಾರಿ ಸಮುದಾಯದ ಮನೆಗಳ ನಿರ್ಮಾಣ, ಬಸ್‌ ಸೆಲ್ಟರ್‌,
ಅಲ್ಪಸಂಖ್ಯಾತರ ಪಿಯು ಕಾಲೇಜು, ಮೌಲಾನ ಅಜಾದ್‌ ಭವನ, ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯ ರಸ್ತೆಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ, ಕುಡಿವ ನೀರಿನ ಟ್ಯಾಂಕ್‌ಗಳು ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next