ಕೈಗೊಳ್ಳುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ, ಕೇಂದ್ರ ವಿಭಾಗದ ಡಿಸಿಪಿ ಚಂದ್ರಗುಪ್ತ ಸೇರಿದಂತೆ ಹಿರಿಯ ಅಧಿಕಾರಿಗಳು ಶುಕ್ರವಾರ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Advertisement
ಹೊಸ ವರ್ಷಾಚರಣೆ ವೇಳೆ ಕಳೆದ ವರ್ಷ ನಡೆದಿದ್ದ ಸಾಮೂಹಿಕ ಲೈಂಗಿಕ ಕಿರುಕುಳದಂತಹ ಘಟನೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ವಾಗಿ ಬಂದೋಬಸ್ತ್ ಮಾಡಲು ಕೈಗೊಳ್ಳ ಬೇಕಾದ ಕ್ರಮಗಳ ಬಗ್ಗೆ ನಿರ್ಧರಸಲು ಅಧಿಕಾರಿಗಳು ಭೇಟಿ ನೀಡಿದ್ದು, ಎಲ್ಲಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಮತ್ತು ಯಾವ ರೀತಿ ಸಿಬ್ಬಂದಿ ನಿಯೋಜಿಸಬೇಕು ಎಂಬ ಬಗ್ಗೆ ಪರಿಶೀಲಿಸಿದ್ದಾರೆ. ನಗರದಲ್ಲಿಹೊಸ ವರ್ಷ ಆಚರಣೆ ಮಾಡಲು ಸಾವಿರಾರು ಮಂದಿ ಎಂ.ಜಿ.ರಸ್ತೆ, ಬಿಗ್ರೇಡ್ ರಸ್ತೆಗೆ ಆಗಮಿಸುತ್ತಾರೆ. ಇದಕ್ಕಾಗಿ ಎಷ್ಟು ಸಿಬ್ಬಂದಿ ಭದ್ರತೆಗೆ ನಿಯೋಜಿ ಸಬೇಕು ಎಂಬ ಬಗ್ಗೆ ಸ್ಥಳ ವೀಕ್ಷಣೆ ಮಾಡಲಾಗಿದೆ ಎಂದು ಕೇಂದ್ರ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.