Advertisement

ರಾಹುಲ್‌ ಗಾಂಧಿ ಭೇಟಿ: ಇಂದು ಕಾಂಗ್ರೆಸ್‌ ಸಭೆ

12:51 PM Feb 10, 2018 | Team Udayavani |

ಬೀದರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಫೆ. 13ರಂದು ಜಿಲ್ಲೆಯ ಬಸವಕಲ್ಯಾಣದ ಐತಿಹಾಸಿಕ ಅನುಭವ ಮಂಟಪಕ್ಕೆ ಭೇಟಿ ನೀಡಲಿರುವ ಪ್ರಯುಕ್ತ ಫೆ.10ರಂದು ಬೆಳಿಗ್ಗೆ 11ಗಂಟೆಗೆ ನಗರದ ಹೋಟೆಲ್‌ ಶಿವಾ ಇಂಟರ್‌ನ್ಯಾಷನಲ್‌ನಲ್ಲಿ ಪೂರ್ವ ಸಿದ್ಧತಾ ಸಭೆ ಹಮ್ಮಿಕೊಳ್ಳಲಾಗಿದೆ.

Advertisement

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಭೆಯ ನೇತೃತ್ವ ವಹಿಸಲಿದ್ದು, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಜಶೇಖರ ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂಖಾನ್‌, ವಿಧಾನ ಪರಿಷತ್‌ ಸದಸ್ಯ ವಿಜಯಸಿಂಗ್‌ ಉಪಸ್ಥಿತರಿರುವರು. ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು ಭಾಗವಹಿಸಬೇಕೆಂದು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next