Advertisement
ಗುರುವಾರ ರಾತ್ರಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ನಗರದ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಶುಕ್ರವಾರ ಬೆಳಗ್ಗೆ 9.20ಕ್ಕೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.
Related Articles
Advertisement
ರಾತ್ರಿ 7.30ಕ್ಕೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ತೆರಳಿ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ. ಮಾ.31ರಂದು ಬೆಳಗ್ಗೆ 10ಗಂಟೆಗೆ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರ ಆವರಣದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ವಾಹನಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ನಗರ ಬಿಜೆಪಿ ಅಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಷ್ಠಿ ಧಾನ್ಯ ಅಭಿಯಾನಕ್ಕೆ ಚಾಲನೆ: ಮಂಡ್ಯ ಜಿಲ್ಲೆ ಪ್ರವಾಸ ಕೈಗೊಳ್ಳಲಿರುವ ಅಮಿತ್ ಶಾ ಅವರು, ಬೆಳಗ್ಗೆ 10.40ಕ್ಕೆ ಶ್ರೀರಂಗಪಟ್ಟಣ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ರಾಜೇಂದ್ರಪ್ಪ ಅವರ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿ, ಮುಷ್ಠಿ ಧಾನ್ಯ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಮೇಲುಕೋಟೆಗೆ ತೆರಳಿ ಚೆಲುವನಾರಾಯಣ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆಯಲಿದ್ದಾರೆ.
ಮಧ್ಯಾಹ್ನ 1.10ಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾವಯವ ಕೃಷಿಕರು, ಮಹಿಳೆಯರ ಜತೆಗೆ ಸಂವಾದ ನಡೆಸಿ, ರೈತರೊಂದಿಗೆ ಭೋಜನ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.45ಕ್ಕೆ ಮಂಡ್ಯದ ಶಶಿಕಿರಣ್ ಕನ್ವೆನನ್ ಹಾಲ್‌ನಲ್ಲಿ ಆಯೋಜಿಸಿರುವ ಐದು ಜಿಲ್ಲೆಗಳ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4.30ಕ್ಕೆ ಚನ್ನಪಟ್ಟಣದ ಕರಕುಶಲ ಪಾರ್ಕ್‌ಗೆ ಭೇಟಿ ನೀಡಲಿದ್ದು, ಸಂಜೆ 4.55ಕ್ಕೆ ಚನ್ನಪಟ್ಟಣದಲ್ಲಿ ರೇಷ್ಮೆ ಬೆಳೆಗಾರರು ಮತ್ತು ರೇಷ್ಮೆ ಉದ್ದಿಮೆದಾರರೊಂದಿಗೆ ಸಂವಾದ ನಡೆಸಲಿದ್ದಾರೆ.
ಅಮಿತ್ ಶಾ ಪ್ರವಾಸದ ವೇಳೆ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ, ಮಾಜಿ ಸಚಿವ ಸಿ.ಟಿ.ರವಿ, ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಹಾಜರಿರುತ್ತಾರೆ ಎಂದು ಹೇಳಿದರು. ಮಾಜಿ ಸಚಿವ ಎಸ್.ಎ.ರಾಮದಾಸ್, ಪಕ್ಷದ ಮುಖಂಡರಾದ ಎಚ್.ವಿ.ರಾಜೀವ, ಹೇಮಂತ್ ಕುಮಾರ್ ಗೌಡ, ಸತೀಶ್ ಮೊದಲಾದವರು ಸುದ್ದಿಗೋಷ್ಠಿàಯಲ್ಲಿ ಹಾಜರಿದ್ದರು.