Advertisement

ಗ್ರಾಪಂ ಚುನಾವಣೆಯಲ್ಲಿ ಎಡಗೈ ಹೆಬ್ಬೆರಳಿಗೆ ಶಾಯಿ

05:18 PM Dec 15, 2020 | Suhan S |

ದಾವಣಗೆರೆ: ಈ ಬಾರಿಯ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಮತದಾರರ ಎಡಗೈ ಹೆಬ್ಬೆರಳಿಗೆಶಾಯಿ ಹಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

Advertisement

ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಗ್ರಾಮ ಪಂಚಾಯತ್‌ ಚುನಾವಣೆ ಸಿದ್ಧತಾ ಸಭೆಯಲ್ಲಿಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತದಾನ ಮಾಡುವಮತದಾರರಿಗೆ ರಾಜ್ಯ ಚುನಾವಣಾ ಆಯೋಗದನಿರ್ದೇಶನದಂತೆ ಎಡಗೈ ಹೆಬ್ಬೆರಳಿಗೆ ಶಾಯಿ ಹಾಕಲಾಗುವುದು ಎಂದರು.

ಗ್ರಾಮ ಪಂಚಾಯತ್‌ ಚುನಾವಣೆಗೆ ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಚುನಾವಣೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತರಬೇತಿ, ಮತಗಟ್ಟೆಗಳ ಮೂಲಭೂತ ಸೌಕರ್ಯ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಸರ್ವಿಸ್‌ ವೋಟರ್ ಪಟ್ಟಿ ತಯಾರಿಕೆ ಸೇರಿದಂತೆ ಎಲ್ಲಾ ಸಿದ್ಧತೆಗಳಾಗಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ 1,279 ಮತಗಟ್ಟೆಗಳಲ್ಲಿ 174ಸೂಕ್ಷ್ಮ , 143 ಅತಿ ಸೂಕ್ಷ್ಮ ಮತ್ತು 962 ಸಾಮಾನ್ಯ ಮತಗಟ್ಟೆಗಳಿವೆ. ಮತದಾರರು ಯಾವುದೇ ಭಯ ಹೆದರಿಕೆ ಅಂಜಿಕೆಗೆ ಒಳಗಾಗದೆ ಮುಕ್ತ, ನ್ಯಾಯಸಮ್ಮತ ಮತ್ತು ನಿರ್ಭೀತವಾಗಿ ಮತ ಚಲಾಯಿಸಲು ಅನುವಾಗುವಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪû ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿರುತ್ತದೆ.ಎಲ್ಲ ರಾಜಕೀಯ ಪಕ್ಷದ ಮುಖಂಡರುಗಳು ಹಾಗೂ ಸ್ಪರ್ಧಾಳುಗಳು ಕಾನೂನು ಉಲ್ಲಂಘನೆ ಮಾಡದಂತೆಚುನಾವಣಾ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಸೂಚಿಸಿದರು.

Advertisement

ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ ಪಕ್ಷದ ಬಾವುಟ-ಬ್ಯಾನರ್‌ ಗಳನ್ನು ಬಳಸುವಂತಿಲ್ಲ. ಅಭ್ಯರ್ಥಿಗಳನ್ನು ತಮ್ಮ ಪಕ್ಷದ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ ಪಕ್ಷದ ಚಿನ್ಹೆ ಇರುವ ಕರಪತ್ರಗಳನ್ನು ಮುದ್ರಿಸುವುದು,ಹಂಚುವುದು ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್‌ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.

ಚುನಾವಣಾ ಅಭ್ಯರ್ಥಿಗಳು ಟಿ.ವಿ ಮಾಧ್ಯಮ, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತುಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲಎಂದು ತಿಳಿಸಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ| ಮಮತಾ ಹೊಸಗೌಡರ್‌, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ರೇಷ್ಮಾ ಹಾನಗಲ್‌, ಅಬಕಾರಿಡಿವೈಎಸ್‌ಪಿ ನಾಗರಾಜ್‌, ಚುನಾವಣಾ ತಹಶೀಲ್ದಾರ್‌ ಪ್ರಸಾದ್‌ ಇತರರು ಭಾಗವಹಿಸಿದ್ದರು.

ಹರಾಜು ಪ್ರಕ್ರಿಯೆ ನಡೆದರೆ ಪ್ರಕರಣ ದಾಖಲು :  ಗ್ರಾಮ ಪಂಚಾಯತ್‌ ಚುನಾವಣೆ ಸಂಬಂಧ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಿಯಾದರೂ ಅಭ್ಯರ್ಥಿಗಳ ಹರಾಜು ಪ್ರಕ್ರಿಯೆ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಎಫ್‌ ಐಆರ್‌ ದಾಖಲಿಸಲಾಗುವುದು. ಚುನಾವಣೆ ಬಹಿಷ್ಕರಿಸುವವರ ಮನವೊಲಿಸಲಾಗುವುದು. ಈಗಾಗಲೇ ಪರವಾನಗಿ ಪಡೆದಿರುವ ಶಸ್ತ್ರಾಸ್ತ್ರಗಳನ್ನು ಇಲಾಖೆಯಲ್ಲಿ ಡಿಪಾಸಿಟ್‌ ಮಾಡಲು ತಿಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next