Advertisement

ಹೊಸದಿಲ್ಲಿಯ ಗೌಪ್ಯಸ್ಥಳದಲ್ಲಿ ದೇವೇಂದ್ರ ಫಡ್ನವಿಸ್- ರಮೇಶ್ ಜಾರಕಿಹೊಳಿ ಭೇಟಿ!

02:16 PM Sep 17, 2020 | keerthan |

ಬೆಂಗಳೂರು: ವಿಶೇಷ ಬೆಳವಣಿಗೆಯಲ್ಲಿ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೊಸದಿಲ್ಲಿಯಲ್ಲಿ ಭೇಟಿಯಾಗಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆದಿದೆ ಎನ್ನಲಾಗಿದೆ.

Advertisement

ಹೊಸದಿಲ್ಲಿಯ ಗೌಪ್ಯಸ್ಥಳದಲ್ಲಿ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ದೇವೇಂದ್ರ ಫಡ್ನವಿಸ್ ಮಧ್ಯೆ ಮಾತುಕತೆ ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಅವರ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಈ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಯಾಗೆ ತಿರುಗೇಟು;ಛೀ 2 ನಿಮಿಷದ ಪಾತ್ರಕ್ಕಾಗಿ….: ವಿವಾದದ ಕಿಡಿಹೊತ್ತಿಸಿದ ಕಂಗನಾ ಹೇಳಿಕೆ

ಕರ್ನಾಟಕದಲ್ಲಿ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿದ ರಮೇಶ್ ಜಾರಕಿಹೊಳಿ‌, ಮಹಾರಾಷ್ಟ್ರದಲ್ಲೂ ತಮ್ಮ ಹಿಡಿತ ಹೊಂದಿದ್ದು, ಪ್ರಭಾವಿ ನಾಯಕರ ಮಧ್ಯದ ಭೇಟಿ ಶಿವಸೇನಾ ಮತ್ತು ಕಾಂಗ್ರೆಸ್ ವಲಯದಲ್ಲಿ ಭೀತಿ ಸೃಷ್ಟಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next