Advertisement

ಪಶ್ಚಿಮ ಘಟ್ಟ ಕರಡು ಅಧಿಸೂಚನೆ ವಿರೋಧಿಸಿ ಮಲೆನಾಡು ಶಾಸಕರ ಸಭೆ ಕರೆದ ಗೃಹ ಸಚಿವ ಜ್ಞಾನೇಂದ್ರ

12:50 PM Jul 13, 2022 | Team Udayavani |

ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ, ಭವಿಷ್ಯಕ್ಕೆ ಮಾರಕ ವಾಗುವ ಪಶ್ಚಿಮಘಟ್ಟ ಕುರಿತ, ಕೇಂದ್ರ ಪರಿಸರ ಸಚಿವಾಲಯದ, ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶ ವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು, ಇದೇ ದಿನಾಂಕ ಜುಲೈ 18 ರಂದು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕರೆದಿದ್ದಾರೆ.

Advertisement

ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು 56826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಲಾಗಿದೆ.

ಇದನ್ನೂ ಓದಿ: ಸುಶಾಂತ್ ಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದದ್ದು ರಿಯಾ ಚಕ್ರವರ್ತಿ: NCB ಆರೋಪಪಟ್ಟಿ

” ಒಂದು ವೇಳೆ  ಈ ಅಧಿಸೂಚನೆ ಅನುಷ್ಠಾನ ಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ, ಅಭಿವೃದ್ದಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ”. ಎಂದಿದ್ದಾರೆ.

ಕರ್ನಾಟಕ ಸರಕಾರ ಈ ಹಿಂದೆ ಡಾ.ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ, ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ, ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ, ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು, ಎಂದು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next