Advertisement

ಗ್ರಾಮಗಳ ಸೇರ್ಪಡೆಗಾಗಿ ಸಭೆ

04:43 PM Jan 04, 2018 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ನೂತನವಾಗಿ ರಚನೆಗೊಂಡ ಗುರುಮಠಕಲ್‌, ವಡಗೇರಾ ಹಾಗೂ ಹುಣಸಗಿ ತಾಲೂಕಗಳಿಗೆ ಗ್ರಾಮಗಳ ಸೇರ್ಪಡೆ ಕುರಿತು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಗ್ರಾಮ ಪಂಚಾಯಿತಿಗಳಾದ ಗೆದ್ದಲಮರಿ, ಬೈಲಕುಂಟಿ, ಕಾಮನಟಗಿ, ಕಚಕನೂರು, ಹೆಬ್ಟಾಳ-ಬಿ. ಇವುಗಳ ವ್ಯಾಪ್ತಿಗೆ ಸೇರಿದ ಗ್ರಾಮಗಳನ್ನು ನೂತನ ಹುಣಸಗಿ ತಾಲೂಕಿಗೆ ಸೇರ್ಪಡೆ ಮಾಡುವ ಬಗ್ಗೆ ಚರ್ಚಿಸಲಾಯಿತು.

Advertisement

ಗುರುಮಠಕಲ್‌ ತಾಲೂಕಿಗೆ ಅಜಲಾಪುರ ಗ್ರಾಮ ಪಂಚಾಯಿತಿಗೆ ಸೇರಿದ ಬದ್ದೆಪ್ಪಲ್ಲಿ ಗ್ರಾಮವನ್ನು ಹಾಗೂ ವಡಗೇರಾ ತಾಲೂಕಿಗೆ ಮಾಲಹಳ್ಳಿ, ಗಡ್ಡೆಸೂಗೂರು, ತೇಗರಾಳ, ಬಬಲಾದ ಗ್ರಾಮಗಳನ್ನು ಸೇರ್ಪಡೆ ಮಾಡುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ ಮಾತನಾಡಿ, ನೂತನ ತಾಲೂಕಗಳ ಅಭಿವೃದ್ಧಿಗಾಗಿ ಸರಕಾರ ಪ್ರತಿ ತಾಲೂಕಿಗೆ 5 ಕೋಟಿ ರೂ. ಅನುದಾನ ನೀಡಿದ್ದು, ಗುರುಮಠಕಲ್‌, ಹುಣಸಗಿ ಹಾಗೂ ವಡಗೇರಾ ತಾಲೂಕಗಳಲ್ಲಿ ವಿವಿಧ ಇಲಾಖೆ ಕಚೇರಿಗಳ ಸ್ಥಾಪಿಸಲು ಸ್ಥಳಾವಕಾಶ ಹಾಗೂ ಕಟ್ಟಡಗಳನ್ನು ಬಾಡಿಗೆ ರೂಪದಲ್ಲಿ ಪಡೆಯಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ನೂತನ ತಾಲೂಕಗಳಿಗೆ ಸೇರ್ಪಡೆ ಮಾಡಿದ ಗ್ರಾಮಗಳ ವರದಿಯನ್ನು ತಯಾರಿಸಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಆಯಾ ತಹಶೀಲ್ದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಜಗದೀಶ ನಾಯಕ್‌, ಜಿಪಂ ಸಿಇಒ ಡಾ|ಅವಿನಾಶ್‌ ಮೆನನ್‌ ರಾಜೇಂದ್ರನ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next