Advertisement

ಅಜ್ಞಾತ ಸ್ಥಳದಲ್ಲಿ ಕಾಂಗ್ರೆಸ್ ನಾಯಕರ ಸಭೆ

11:51 PM Jul 08, 2019 | Lakshmi GovindaRaj |

ಬೆಂಗಳೂರು: ಸರ್ಕಾರ ಉಳಿಸಲು ಸಚಿವರಿಂದ ಸಾಮೂಹಿಕ ರಾಜೀನಾಮೆ ಪಡೆದುಕೊಂಡಿರುವ ಕಾಂಗ್ರೆಸ್‌ ನಾಯಕರು ಸಂಜೆ ಅಜ್ಞಾತ ಸ್ಥಳಕ್ಕೆ ತೆರಳಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ.

Advertisement

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಗೃಹ ಸಚಿವ ಎಂ.ಬಿ. ಪಾಟೀಲ್‌ ಅಜ್ಞಾತ ಸ್ಥಳಕ್ಕೆ ತೆರಳಿ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಇರುವುದರಿಂದ ಶಾಸಕರ ಅಭಿಪ್ರಾಯ ಸಂಗ್ರಹಿಸಿ, ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೈಗೊಳ್ಳಬೇಕಾದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next