ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜ ನಿವೇಶನ ರಹಿತ ಕುಟುಂಬಗಳ ಪಟ್ಟಿ ನೀಡುವಂತೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ. ಆದರೆ ಇನ್ನೂ ಸಮರ್ಪಕ ಮಾಹಿತಿ ಒದಗಿಸಿಲ್ಲ ಎಂದ ಜಿಲ್ಲಾಧಿಕಾರಿ ಅವರು, ಈಗಾಗಲೇ 94ಸಿ ಮತ್ತು 94ಸಿಸಿ ರಡಿ ನಿವೇಶನ ಹಂಚಿಕೆ ಹೊರತುಪಡಿಸಿ, ಉಳಿದಂತೆ ನಿವೇಶನ ರಹಿತರ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
Advertisement
ಜಿಲೆಯ ಹಲವು ಕಡೆಗಳಲ್ಲಿ ಪರಿಶಿಷ್ಟರಿಗೆ ನಿವೇಶನ, ಸ್ಮಶಾನ ಭೂಮಿ, ರಸ್ತೆ ಹಾಗೂ ಮೂಲಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು. ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ನಿವೇಶನ ರಹಿತರಿಗೆ ನಿವೇಶನ, ಸ್ಮಶಾನ ಭೂಮಿ, ಹಾಗೆಯೇ ಅಗತ್ಯ ಮೂಲಸೌಲಭ್ಯ ಒದಗಿಸಲು ಮುಂದಾಗಬೇಕಿದೆ. ಗ್ರಾಮ ಸಭೆಗಳಲ್ಲಿ ನಿವೇಶನ ರಹಿತರ ಪಟ್ಟಿ ದೊರೆಯಲಿದ್ದು, ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮಸಭೆಗಳಿಗೆ ತೆರಳಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮಾಜದ ನಿವೇಶನ ರಹಿತರ ಪಟ್ಟಿ ಪಡೆಯುವಂತೆ ಅವರು ಸಲಹೆ ಮಾಡಿದರು.
Related Articles
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಕಾಲನಿ ಹಾಗೂ ಹಾಡಿಗಳಿಗೆ ತೆರಳಲು ಯೋಗ್ಯ ರಸ್ತೆಗಳು ಇಲ್ಲ, ಆದ್ದರಿಂದ ರಸ್ತೆ ನಿರ್ಮಾಣ ಮಾಡಬೇಕು. ಹತ್ತಿರದಲ್ಲಿ ಶಾಲೆ-ಅಂಗನವಾಡಿಗಳನ್ನು ತೆರೆಯಬೇಕು ಎಂದು ಪಳನಿ ಪ್ರಕಾಶ ಮತ್ತು ಮುತ್ತಪ್ಪ ಅವರು ಕೋರಿದರು. ವಿರಾಜಪೇಟೆ ಸ್ಥಳೀಯ ಸಂಸ್ಥೆಯಲ್ಲಿ ದಿನಗೂಲಿ ಪೌರಕಾರ್ಮಿಕರಿಗೆ ಸಂಬಳ ದೊರೆತ್ತಿಲ್ಲ, ಈಗಾಗಲೇ ತಮ್ಮ ಗಮನಕ್ಕೆ ತರಲಾಗಿದ್ದು, ಇದುವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ಪಳನಿ ಪ್ರಕಾಶ ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣವಿದ್ದು, ನ್ಯಾಯಾಲಯದಲ್ಲಿ ನಿರ್ಧಾರವಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
Advertisement