ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನವೋ ಅಥವಾ ವಿಧಾನಸಭೆ ಚುನಾವಣೆ ನಡೆಸುವ ಸಲುವಾಗಿ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಚರ್ಚೆಯೋ…!
ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದ 14 ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಯಲಿದ್ದು, ಅದರಲ್ಲಿ ಈ ಕುತೂಹಲಕ್ಕೆ ತೆರೆ ಬೀಳಲಿದೆ.
ಗುಪRರ್‌ನಿಂದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಮೂವರು, ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪ್ರಾದೇಶಿಕ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ 48 ಗಂಟೆಗಳ ಬಿಗಿ ಬಂದೋಬಸ್ತ್ ಜಾರಿಗೊಳಿಸಲಾಗಿದೆ. ಅಲ್ಲದೇ ಶುಕ್ರವಾರದ ವರೆಗೆ ಇಂಟರ್ನೆಟ್ ಸೌಲಭ್ಯಕ್ಕೆ ಕತ್ತರಿ ಹಾಕುವ ಸಾಧ್ಯತೆ ಇದೆ.
ಸಭೆಯ ಅಜೆಂಡಾ ಏನು? :
ಕೇಂದ್ರ ಸರಕಾರ ಇದುವರೆಗೆ ಸಭೆಯ ಅಜೆಂಡಾ ಏನು ಎಂಬ ಬಗ್ಗೆ ತುಟಿ ಬಿಚ್ಚಿಲ್ಲ. ಆದರೂ ಆಂಗ್ಲ ಮಾಧ್ಯಮಗಳಲ್ಲಿನ ವರದಿ ಪ್ರಕಾರ, ಈ ಸಭೆ ಕರೆದಿರುವುದು ಕ್ಷೇತ್ರ ಮರುವಿಂಗಡಣೆ ಬಗ್ಗೆ ಚರ್ಚಿಸುವ ಸಲುವಾಗಿ. ಇನ್ನೂ ಕೆಲವು ಮಾಧ್ಯಮಗಳು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವ ಸಲುವಾಗಿ ಈ ಸಭೆ ಕರೆಯಲಾಗಿದೆ ಎಂದು ಹೇಳಿವೆ.