ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದರಿಂದ ಆಯಾ ಇಲಾಖೆಗಳ ಸಚಿವರು ಮಳೆ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕನಕ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಅವಕಾಶ ಇಲ್ಲ. ಆದರೆ, ಇಲಾಖಾ ಸಚಿವರು ಭೇಟಿ ನೀಡಲು ತೊಂದರೆಯಿಲ್ಲ. ಹೀಗಾಗಿ ಆಯಾ ಇಲಾಖೆಯ ಸಚಿವರು ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಗೋವಾ 12 ಶಾಸಕರ ಅನರ್ಹ ಪ್ರಕರಣ; ಡಿ.10 ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ
ಅಕಾಲಿಕ ಮಳೆಯಿಂದ ಹಾಳಾಗಿರುವ ರಸ್ತೆಗಳ ಅಬಿವೃದ್ಧಿಗೆ 500 ಕೋಟಿ ರೂ. ನೀಡಲಾಗಿದೆ. ಪೂರ್ಣ ಮನೆ ಹಾನಿಯಾದವರಿಗೆ ಒಂದು ಲಕ್ಷ ಬಿಡುಗಡೆಗೆ ಸೂಚಿಸಿದ್ದೇನೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೆ ಆದೇಶಿಸಿದ್ದೇನೆ. ಬೆಳೆ ಸಮೀಕ್ಷೆ ಇಂದಿನಿಂದ ಶೀಘ್ರವಾಗಿ ಆಗಬೇಕು. ಪರಿಹಾರ ಆ್ಯಪ್‌ನಲ್ಲಿ ದಾಖಲಿಸಿ ಅದರಂತೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.