ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಹಾ ಪೋಷಕರಾಗಿದ್ದು, ಸಂಸ್ಥೆಯ ಪ್ರತಿಯೊಂದು ಕಾರ್ಯಗಳಿಗೂ ಸಲಹೆ-ಸೂಚನೆಗಳನ್ನು ನೀಡುತ್ತಿದ್ದ ಕೊಂಕಣ ರೈಲ್ವೆಯ ರೂವಾರಿ ಜಾರ್ಜ್ ಫೆರ್ನಾಂಡಿಸ್ ಅವರ ಸಂಸ್ಮರಣೆಗಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಸಮಿತಿಯ ಪರವಾಗಿ ಈಗಾಗಲೇ ಕೇಂದ್ರ ಗೃಹ ಸಚಿವರಲ್ಲಿ ವಿನಂತಿಸಿ ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಸಮಿತಿಯ ಸರ್ವ ಸದಸ್ಯರು ಸಂಪೂರ್ಣ ಬೆಂಬಲವನ್ನು ಸೂಚಿಸಿರುವುದು ಸಂತೋಷವಾಗುತ್ತಿದೆ. ಅವಿಭಜಿತ ದ.ಕ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಮಿತಿಯ ಧ್ಯೇಯವಾಗಿದ್ದು, ಅದಕ್ಕೆ ಸಮಿತಿಯು ಕಟಿಬದ್ಧವಾಗಿದೆ. ಸಮಿತಿಯ ಎಲ್ಲಾ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಅಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ನುಡಿದರು.
ಫೆ. 25ರಂದು ಕುರ್ಲಾ ಪೂರ್ವದ ಬಂಟರ ಭವನದ ಅನೆಕ್ಸ್ ಕಟ್ಟಡದ ಸಭಾಗೃಹದಲ್ಲಿ ನಡೆದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಕಾರ್ಯಕಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉಡಪಿ ಜಿಲ್ಲೆಯ ಹೆಚ್ಚುವರಿ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಪ್ರಸ್ತಾವಿಸಿದಂತೆ ಬೈಂದೂರು ಬಳಿಯ ಒತ್ತಿನೆಣೆ ಪ್ರದೇಶದ ಪರಿವೀಕ್ಷಣೆ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಸ್ಥಳೀಯ ವಿವಿಧ ಸಮಿತಿಗಳು ಶ್ರಮಿಸುತ್ತಿವೆ. ಈ ದಿಸೆಯಲ್ಲಿ ಸಮಿತಿಯು ಸೂಕ್ತ ಸಹಕಾರ ನೀಡಲಿದೆ ಎಂದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಮುದ್ರ ತಡಿಯನ್ನು ಗೋವಾ ಮತ್ತು ಕೇರಳದಲ್ಲಿನ ಪ್ರವಾಸಿ ತಾಣಗಳಂತೆ ಅಭಿವೃದ್ಧಿಪಡಿಸುವ ಅಗತ್ಯತೆ ಹಾಗೂ ಪ್ರವಾಸೋದ್ಯಮದ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಧರ್ಮಪಾಲ್ ದೇವಾಡಿಗ, ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ದಾಸ್, ಗೌರವ ಕೋಶಾಧಿಕಾರಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಉಪಾಧ್ಯಕ್ಷರುಗಳಾದ ಅಂಧೇರಿ ಕರ್ನಾಟಕ ಸಂಘದ ಅಧ್ಯಕ್ಷ ಪಿ. ಡಿ. ಶೆಟ್ಟಿ, ಪ್ರಸಿದ್ಧ ಲೆಕ್ಕಪರಿಶೋಧಕ ಸಿ ಎ ಐ. ಆರ್. ಶೆಟ್ಟಿ, ಗಾಣಿಗ ಸಮಾಜ ಮುಂಬಯಿ ಅಧ್ಯಕ್ಷ ರಾಮಚಂದ್ರ ಗಾಣಿಗ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್. ಬಂಗೇರ, ಕಾರ್ಮಿಕ ನಾಯಕ ಫೆಲಿಕ್ಸ್ ಡಿ’ಸೋಜಾ, ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ ಇದರ ಅಧ್ಯಕ್ಷ ಆ್ಯಂಟೋನಿ ಸಿಕ್ವೇರಾ, ಕೊಂಕಣಿ ವೆಲ್ಫೆàರ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಹ್ಯಾರಿ ಸಿಕ್ವೇರಾ, ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್ ಕುಲಾಲ್, ಗೌರವ ಕೋಶಾಧಿಕಾರಿ ತುಳಸಿದಾಸ್ ಅಮೀನ್, ನ್ಯಾಯವಾದಿ ಪದ್ಮನಾಭ ಶೆಟ್ಟಿ, ಬಂಟರ ಸಂಘ ಪಶ್ಚಿಮ ವಲಯದ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ, ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಪಿ. ಸಾಫಲ್ಯ, ವಿಶ್ವಕರ್ಮ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಸದಾನಂದ ಎನ್. ಆಚಾರ್ಯ, ಮಹಾರಾಷ್ಟ್ರ ಕನ್ನಡಿಗ ಕಲಾವಿದರ ಪರಿಷತ್ತು ಅಧ್ಯಕ್ಷ ಡಾ| ಸುರೇಂದ್ರ ಕುಮಾರ್ ಹೆಗ್ಡೆ, ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಡಾ| ಆರ್. ಕೆ. ಶೆಟ್ಟಿ, ಒಕ್ಕಲಿಗರ ಸಂಘ ಮುಂಬಯಿ ಅಧ್ಯಕ್ಷ ಜಿತೇಂದ್ರ ಗೌಡ, ರಿಲಾಯನ್ಸ್ ಇಂಡಸ್ಟಿÅàಸ್ ಇದರ ಉಪಾಧ್ಯಕ್ಷ ದಯಾಸಾಗರ್ ಚೌಟ, ಬಿಲ್ಲವರ ಅಸೋಸಿಯೇಶನ್ ವಲಯಾಧ್ಯಕ್ಷ ಎಂ. ಎನ್. ಕರ್ಕೇರ, ಹೆಜಮಾಡಿ ಮೊಗವೀರ ಯುವಕ ಸಂಘದ ಅಧ್ಯಕ್ಷ ಕರುಣಾಕರ ಎಚ್., ಜಿಎಸ್‌ಬಿ ಸೇವಾ ಮಂಡಳದ ಜಯಪ್ರಕಾಶ್ ಕಾಮತ್, ದೇವಾಡಿಗ ಸಂಘ ನಿಕಟಪೂರ್ವ ಅಧ್ಯಕ್ಷ ವಾಸು ಎಸ್. ದೇವಾಡಿಗ, ಕೃಷ್ಣ ಕುಮಾರ್ ಬಂಗೇರ, ಕಲಾಜಗತ್ತು ವಿಜಯಕುಮಾರ್ ಶೆಟ್ಟಿ, ದೇವಾಡಿಗ ಸಂಘ ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಜನಾರ್ದನ ಎಸ್. ದೇವಾಡಿಗ, ವಿದ್ಯಾದಾಯಿನಿ ಮಹಾಸಭಾದ ಗೌರವ ಕಾರ್ಯದರ್ಶಿ ಚಿತ್ರಾಪು ಕೆ. ಎಂ. ಕೋಟ್ಯಾನ್, ಭಂಡಾರಿ ಸೇವಾ ಸಂಘ ಮುಂಬಯಿ ಅಧ್ಯಕ್ಷ ರಾಕೇಶ್ ಭಂಡಾರಿ ಮತ್ತಿತರರಿದ್ದರು.
ಪ್ರಾರಂಭದಲ್ಲಿ ನೂತನ ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ದಾಸ್ ಅವರು ವರದಿ ವಾಚಿಸಿದರು. ನೂತನ ಪದಾಧಿಕಾರಿಗಳ ಬಗ್ಗೆ ವಿವರಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ದಾಸ್ ಅವರು ನೂತನ ಸದಸ್ಯರನ್ನು ಸಮಿತಿಗೆ ನೋಂದಾಯಿಸುವ ಬಗ್ಗೆ ಅಂಗೀಕಾರ ಪಡೆದರು. ಆ ಬಳಿಕ ಇತ್ತೀಚೆಗೆ ಪುಲ್ವಾಮಾ ಗಡಿ ಪ್ರದೇಶದಲ್ಲಿ ಉಗ್ರರ ಪೈಶಾಚಿಕ ಕೃತ್ಯಕ್ಕೆ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ತೋನ್ಸೆ ಜಯಕೃಷ್ಣ ಶೆಟ್ಟಿ ಅವರು ಅವಿಭಜಿತ ಜಿಲ್ಲೆಯ ಕೆಲವು ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು. ನಗರ ಸಭೆ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ವಿದ್ಯುಚಾಲಿತ ಶ್ಮಶಾನ ವ್ಯವಸ್ಥೆಯ ಅಗತ್ಯತೆ ಬಗ್ಗೆ ಸದಸ್ಯರು ತಮ್ಮ ತಮ್ಮ ಅಭಿಪ್ರಾಯ ಮಂಡಿಸಿದರು. ಸದಸ್ಯರೆಲ್ಲರ ವಿಚಾರಗಳನ್ನು ತಿಳಿದ ಬಳಿಕ ಅಧ್ಯಕ್ಷರು ತಮ್ಮ ಅಭಿಪ್ರಾಯವನ್ನು ತಿಳಿಸಿ, ವಾಯುಮಾಲಿನ್ಯದ ಬಗ್ಗೆ ಸಂಬಂಧಪಟ್ಟ ಆಡಳಿತ ಮುಖಾಂತರ ಕರ್ನಾಟಕ ಸರಕಾರವನ್ನು ಉತ್ತಾಯಿಸಬೇಕು. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿತದೃಷ್ಟಿಯಿಂದ ಇನ್ನು ಮುಂದೆ ಯಾವುದೇ ರಾಸಾಯನಿಕ ಉದ್ದಿಮೆಗಳನ್ನು ನಿಷೇಧಿಸುವುದು ಮತ್ತು ಆಟೋಮೊಬೈಲ್, ಪರ್ಯಾವರಣ ಪ್ರೇಮಿ ಉದ್ದಿಮೆಗಳನ್ನು ಸಮಿತಿಯು ಪ್ರೋತ್ಸಾಹಿಸುವುದಾಗಿ ಸರ್ವಾನುಮತದಿಂದ ನಿರ್ಣಾಯಿಸಲಾಯಿತು. ಪ್ರವಾಸೋದ್ಯಮದ ಬಗ್ಗೆ ಸದಸ್ಯರೆಲ್ಲರೂ ಸರ್ವಾನುಮತದಿಂದ ಬೆಂಬಲ ನೀಡಿ ಈ ದಿಸೆಯಲ್ಲಿ ಸಮಿತಿ ನೇತೃತ್ವ ವಹಿಸಿ ಕಾರ್ಯಪ್ರವೃತ್ತವಾಗುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಮಿತಿಯ ಕಾರ್ಯದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಕ್ರಿಯಗೊಳಿಸಬೇಕು. ಜಿಲ್ಲಾ ಮಟ್ಟದ ಪದಾಧಿಕಾರಿಗಳನ್ನು ಕೇಂದ್ರಿಯ ಸಮಿತಿಯಲ್ಲಿ ಸೇರ್ಪಡೆಗೊಳಿಸುವ ಸೂಚನೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.