Advertisement
ಸಭೆಯಲ್ಲಿ ಪ್ರಸ್ತಾಪವಾಗಿರುವ ಪ್ರಮುಖ ಅಂಶಗಳು – ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೊಬೈಲ್ ನೆಟ್ ವರ್ಕ್ ಸಮಸ್ಯೆ ಹೆಚ್ಚಾಗಿ ಕಾಣಿಸುತ್ತಿದ್ದು ಖಾಸಗಿ ಕಂಪನಿಗಳ ಜೊತೆಗೂಡಿ ಹೆಚ್ಚಿನ ಟವರ್ ಗಳನ್ನು ಮಲೆನಾಡು ಭಾಗದಲ್ಲಿನ ನಿರ್ಮಾಣ ಮಾಡಬೇಕು.
– ಮಲೆನಾಡು ಭಾಗದಲ್ಲಿ ಹೆಚ್ಚಿನ ಭಾಗದಲ್ಲಿ ಬಿಎಸ್ ಎನ್ ಎಲ್ ಇದ್ದು ಖಾಸಗಿ ಕಂಪನಿಗಳು ಜೊತೆಗೂಡಬೇಕು ಇದರಿಂದ ಬೆಂಗಳೂರಿನಿಂದ ರಜೆ ಸಂದರ್ಭದಲ್ಲಿ ಬರುವ ಯುವಕರಿಗೆ ಸಹಾಯವಾಗಲಿದೆ.
-ಈ ಸಂದರ್ಭದಲ್ಲಿ ಹಾಜರಿದ್ದ ಖಾಸಗಿ ಟೆಲಿಕಾಮ್ ಕಂಪನಿಗಳಿಗೆ ಮಲೆನಾಡು ಭಾಗದಲ್ಲಿ ಯಾವುದೇ ರೀತಿಯಲ್ಲಿ ನೆಟ್‌ವರ್ಕ್ ಸಮಸ್ಯೆ ತಲೆದೂರುದಂತೆ ಟವರ್ ಗಳನ್ನು ಅಳವಡಿಸಬೇಕು ಹಾಗು ಇದಕ್ಕೆ ಬೇಕಾದ ನೆರವನ್ನು ನೀಡಲು ಸಿದ್ದ ಅಂತ ಕಂಪನಿಗಳಿಗೆ ಭರವಸೆ ನೀಡಲಾಯಿತು.
– ತುಮಕೂರು -ಶಿವಮೊಗ್ಗ ಹೈವೇ ಯೋಜನೆಗೆ ತೊಡಕಾಗಿರೋ ತುಮಕೂರು ಪಟ್ಟಣದ ಭೂ ಸ್ವಾದೀನ ಪ್ರಕ್ರಿಯೆಗೆ ಇದ್ದ ಸಮಸ್ಯೆಗಳನ್ನು ಬಗೆಹರಿಸಲಾಯಿತು .
-ಹೈವೆ ಯಲ್ಲಿ ಹಾದು ಹೋಗುವ ಜಾಗದಲ್ಲಿರೋ ಕರೆಗಳನ್ನು ಹೂಳೆತ್ತಿ ಅದರ ಮಣ್ಣನ್ನು ರಸ್ತೆ ನಿರ್ಮಾಣ ಕ್ಕೆ ಬಳಸಿಕೊಳ್ಳಲು ತೀರ್ಮಾನ ಮಾಡಲಾಯಿತು.
-ಹೈವೇ ನಿರ್ಮಾಣ ಕಾಮಗಾರಿಗಳುನ್ನು ತ್ವರಿತವಾಗಿ ಮುಗಿಸಲು ಹೆಚ್ಚಿನ ಅಧಿಕಾರಿಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
-ಇನ್ನು ಸಿಗಂಧೂರು ಸೇತುವೆ ನಿರ್ಮಣ ಒಟ್ಟು ಉದ್ದ 2.4 ಕಿಲೋಮೀಟರ್ ಇದ್ದು ಈ ಸೇತುವೆಯನ್ನು ಪ್ರವಾಸಿ ತಾಣಕ್ಕೆ ಅನುಕೂಲವಾಗುವಂತೆ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಆದಷ್ಟು ಬೇಗ ಕೆಲಸ ಆರಂಭ ಮಾಡಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಯಿತು.
-ಶಿವಮೊಗ್ಗ ಸುತ್ತ ಉದ್ದೇಶಿಸಲಾಗಿರೋ 2 ಲೈನ್ ರಿಂಗ್ ರಸ್ತೆಗೆ ಸಂಬಂಧಿಸಿದಂತೆ ಇದ್ದ ರೈಲ್ವೇ ಭೂಸ್ವಾಧೀನಕ್ಕೆ ಇದ್ದ ಸಮಸ್ಯೆ ಬಗೆಹರಿಸಲಾಯಿತು. ಆದಷ್ಟು ಬೇಗ ರಿಂಗ್ ರಸ್ತೆ ನಿರ್ಮಾಣ ಮಾಡಲು ಸೂಚನೆ ನೀಡಲಾಯಿತು.