Advertisement

ವಾಲ್ಮೀಕಿ ಪ್ರತಿಮೆ ಅನಾವರಣ ಸಿದ್ಧತೆಗೆ 19ರಂದು ಸಭೆ

11:20 AM Aug 13, 2017 | |

ಬೆಂಗಳೂರು: ವಿಧಾನಸೌಧದ ಪಶ್ಚಿಮ ದ್ವಾರದ ಬಲಭಾಗದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಅನಾವರಣ ಕಾರ್ಯಕ್ರಮದ ಸ್ವಾಗತ ಸಮಿತಿ ರಚನೆ ಮತ್ತಿತರ ರೂಪುರೇಷೆ ತಯಾರಿಸಲು ಆ.19ರಂದು ಸಭೆ ನಡೆಸಲು ಅಖೀಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತೀರ್ಮಾನಿಸಿದೆ.

Advertisement

ಶಾಸಕರ ಭವನದಲ್ಲಿ ವಿಧಾನಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ ಅಧ್ಯಕ್ಷತೆಯಲ್ಲಿ ನಡೆದ ವಾಲ್ಮೀಕಿ ಸಮಾಜದ ಮಠಾಧೀಶರು, ಮುಖಂಡರ ಪೂರ್ವಭಾವಿ ಸಭೆಯಲ್ಲಿ ಆ.19ರಂದು ದಾವಣಗೆರೆ ಜಿಲ್ಲೆಯ ರಾಜನಹಳ್ಳಿ ವಾಲ್ಮೀಕಿ ಪೀಠ ಮಹಾಸಂಸ್ಥಾನದಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು. 

ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಬೇಕಾಗಿದೆ. ಸುಮಾರು 1 ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತಿತರ ಗಣ್ಯರನ್ನು ಆಹ್ವಾನಿಸಬೇಕಿದೆ.

ಇದಕ್ಕೆ ಸ್ವಾಗತ ಸಮಿತಿ ಸೇರಿದಂತೆ ಹಲವು ಉಪಸಮಿತಿಗಳನ್ನು ರಚಿಸಬೇಕಾಗಿದೆ. ಅದಕ್ಕಾಗಿ ವಾಲ್ಮೀಕಿ ಸಮಾಜದ 12 ಮಠಾಧೀಶರ ಸಮ್ಮುಖದಲ್ಲಿ ಸಭೆ ನಡೆಸಲು ವಾಲ್ಮೀಕಿ ನಾಯಕ ಮಹಾಸಭಾ ನಿರ್ಧರಿಸಿದೆ. ಸಭೆಯಲ್ಲಿ ರಾಜನಹಳ್ಳಿ ವಾಲ್ಮೀಕಿ ಮಹಾಸಂಸ್ಥಾನದ ಪ್ರಸನ್ನಾನಂದ ಸ್ವಾಮೀಜಿ, ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next