Advertisement
ಕ್ರಿಯಾ ಯೋಜನೆ: ಜಿಲ್ಲೆಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ, ಗೌರಿಬಿದನೂರು, ಗುಡಿಬಂಡೆ, ಚಿಂತಾಮಣಿ ತಾಲೂಕಿನಲ್ಲಿ 111 ಸರ್ಕಾರಿ, 45 ಅನುದಾನಿತ, 119 ಅನುದಾನರಹಿತ, ಸಮಾಜ ಕಲ್ಯಾಣಇಲಾಖೆಯ ಅಧೀನದಲ್ಲಿರುವ 13, ಕೇಂದ್ರಿಯ 2ಶಾಲೆಗಳು ಸಹಿತ 290 ಪ್ರೌಢ ಶಾಲೆಗಳಿದ್ದು 8563ಬಾಲಕರು, 7847 ಬಾಲಕಿಯರು ಸಹಿತ 16,410ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿದ್ದಾರೆ. ಅದಕ್ಕೆ ಪೂರಕವಾಗಿ ವಿಷಯಾ ಧಾರಿತ ತಜ್ಞರ ಸಲಹೆ ಪಡೆದು ವಿದ್ಯಾರ್ಥಿಗಳಶೈಕ್ಷಣಿಕ ಪ್ರಗತಿಗಾಗಿ ಸ್ಫೂರ್ತಿ-2 ಎಂಬ ಹೆಸರಿನಡಿ ಒಂದು ಕ್ರಿಯಾ ಯೋಜನೆ ತಯಾರಿಸಲಾಗಿದೆ.
Related Articles
Advertisement
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ: ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನೀಡುತ್ತಿರುವ ವಿದ್ಯಾರ್ಥಿ ಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಮಾಡೆಲ್ ಪ್ರಶ್ನೆ ಪತ್ರಿಕೆಗಳನ್ನು ಸಹ ಸಿದ್ಧಪಡಿಸಿ ವಿತರಿಸಲಾಗಿದೆ. ಶಿಕ್ಷಣ ತಜ್ಞರಮೂಲಕ ಅಗತ್ಯ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹೇಗಿದೆಯೆಂಬುದು ಸಹ ಮೌಲ್ಯ ಮಾಪನ ಮಾಡುವ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಪ್ರತಿ ಮಾಹೆಯಲ್ಲಿ ಮಾಡಿರುವ ಸಾಧನೆಗಳನ್ನುಪರಾಮರ್ಶೆ ನಡೆಯಲಿದ್ದು, ಸಾರ್ವಜನಿಕ ಶಿಕ್ಷಣಇಲಾ ಖೆಯ ಉಪನಿರ್ದೇಶಕ ನಾಗೇಶ್ ಅವರುಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ ನೀಡುವ ಜೊತೆಗೆ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹೆಚ್ಚಿಸಲು ವಿಶೇಷ ಕಾಳಜಿ ವಹಿಸಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸ್ಪಂದಿಸಿ ಸಾಥ್ ನೀಡುತ್ತಿದ್ದಾರೆ.
ಶಾಲೆಗಳಿಗೆ ಭೇಟಿ, ಫಾರ್ಮೆಟ್ :
ಪ್ರಸಕ್ತ ಸಾಲಿನಲ್ಲಿ ಪ್ರತಿ ತಿಂಗಳು ಯಾವ ಯಾವ ರೀತಿಯ ಕಾರ್ಯಕ್ರಮಗಳನ್ನು ನಡೆಸಬೇಕು, ಪೋಷಕರ ಸಭೆ-ಮನೆ ಮನೆ ಭೇಟಿ ಅಭಿಯಾನ ಸಹಿತ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಟೈಮ್ ಟೇಬಲ್ ನೀಡಲಾಗಿದೆ. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರತ್ಯೇಕ ಪ್ರೊಫೈಲ್ ಸಿದ್ಧಪಡಿಸಲು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ. ಶೈಕ್ಷಣಿಕ ಪ್ರಗತಿ ಸಾಧಿಸಲು ದತ್ತು ಪಡೆದುಕೊಂಡಿರುವಅಧಿಕಾರಿಗಳು ಶಾಲೆಗಳಿಗೆ ಭೇಟಿ ಯಾವ ವಿಷಯಗಳನ್ನು ಪರಿಶೀಲಿಸಬೇಕೆಂದು ಫಾರ್ಮೆಟ್ ಸಹ ಸಿದ್ಧಪಡಿಸಿ ನೀಡಲಾಗಿದೆ.
ತಲಾ ಮೂರು ಪ್ರೌಢಶಾಲೆ ದತ್ತು :
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಡಯಟ್ ಉಪನಿರ್ದೇಶಕರು ಹಾಗೂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮನ್ವಯಾಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರು, ವಿಷಯ ಪರಿವೀಕ್ಷಕರಿಗೆ ತಲಾ ಮೂರು ಪ್ರೌಢಶಾಲೆಗಳನ್ನು ದತ್ತು ನೀಡಿ ಪ್ರಸಕ್ತ ಸಾಲಿನಲ್ಲಿ ಫಲಿತಾಂಶವನ್ನು ಹೆಚ್ಚಿಸುವ ಹೊಣೆಗಾರಿಕೆ ನೀಡಲಾಗಿದೆ.
ಪರೀಕ್ಷೆ ನಿರ್ಭೀತಿಯಿಂದ ಎದುರಿಸಲು ಮಾರ್ಗದರ್ಶನ :
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಪ್ರಸಕ್ತ ಸಾಲಿನಲ್ಲಿ ಅಗ್ರಸ್ಥಾನವನ್ನು ಕಾಯ್ದೆರಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಶೈಕ್ಷಣಿಕ ಪ್ರಗತಿಗಾಗಿ ಸ್ಫೂರ್ತಿ-2 ಎಂಬ ಹೆಸರಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್.ಜಿ.ನಾಗೇಶ್ ತಿಳಿಸಿದ್ದಾರೆ. “”ಉದಯವಾಣಿ”ಗೆಪ್ರತಿಕ್ರಿಯಿಸಿದ ಅವರು, ಚಿಕ್ಕಬಳ್ಳಾಪುರ ಸಾಯಿ ಟ್ರಸ್ಟ್‌ನ ಮೂಲಕ 20 ಸಾವಿರನೋಟಬುಕ್‌ಗಳ ಸಹಾಯ ಪಡೆದು ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಯಪ್ರತಿ ವಿದ್ಯಾರ್ಥಿಗಳಿಗೆ ತಲಾ ಎರಡು ನೋಟ್‌ಬುಕ್ ನೀಡಲು ನಿರ್ಧರಿಸಲಾಗಿದೆ.ಎಸಿಸಿ ಸೀಮೆಂಟ್ ಕಾರ್ಖಾನೆಯಿಂದ 6 ವಿಷಯಗಳ ಕುರಿತು 5 ಸಾವಿರವಿದ್ಯಾರ್ಥಿಗಳಿಗೆ ಸ್ಟಡಿ ಪ್ಯಾಕೇಜ್ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರ್ಭೀತಿಯಿಂದ ಎದುರಿಸಲು ಅಗತ್ಯ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿದ್ದೇವೆ.
ಎಂ.ಎ.ತಮೀಮ್ ಪಾಷ