Advertisement
ಬೆಳಗಾವಿ ಅಧಿವೇಶನದ ಅನಂತರ ಕರಾವಳಿ ಶಾಸಕರೆಲ್ಲ ಸಭೆ ಸೇರಿ, ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಸಚಿವರೊಂದಿಗೆ ಸಮಾಲೋಚನೆ ನಡೆಸಲು ಕಾಲಾವಕಾಶ ಕೋರಿದ್ದೆವು. ಸಚಿವರು ಡಿ. 28 ಅಥವಾ 29ರಂದು ಸಭೆ ನಡೆಸುವ ಭರವಸೆ ನೀಡಿದ್ದಾರೆ. ಸಭೆಯ ಅನಂತರ ಮುಂದಿನ ತೀರ್ಮಾನ ತೆಗೆದು ಕೊಳ್ಳ ಲಿದ್ದೇವೆ ಎಂದು ವಿಧಾನ ಸಭೆ ವಿಪಕ್ಷ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ‘ಉದಯವಾಣಿ’ಗೆ ತಿಳಿಸಿದರು.
ರಾಯಚೂರಿನಲ್ಲಿ ಅಧಿಕಾರಿಯೊಬ್ಬರ ಮೇಲೆ ಲಾರಿ ಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬರನ್ನು ಬಂಧಿಸಿದ್ದು, ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ.