Advertisement

ಪಕ್ಷಗಳ ಪ್ರಮುಖರೊಂದಿಗೆ ಸಭೆ: ಬೂತ್‌ ಏಜೆಂಟರ ಮಾಹಿತಿಗೆ ಸೂಚನೆ

09:11 PM Sep 05, 2019 | Sriram |

ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕೈಗೊಳ್ಳುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಸಭೆಯಲ್ಲಿ ಸಜೀಲ್‌ ಕೃಷ್ಣ (ಬಿಜೆಪಿ), ತೆನ್ನಿರಾ ಮೈನಾ (ಕಾಂಗ್ರೆಸ್‌) ಮತ್ತು ಗೀರಿಶ್‌ (ಕಮ್ಯೂನಿಸ್ಟ್‌) ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಬೂತ್‌ ಮಟ್ಟದ ಅಧಿಕಾರಿಗಳು ಸೆಪ್ಟಂಬರ್‌ 1 ರಿಂದ ಅಕ್ಟೋಬರ್‌ 15ರ ವರೆಗೆ ಮನೆ ಮನೆಗೆ ಭೇಟಿ ನೀಡಲಿದ್ದು, ಬೂತ್‌ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 2019ರ ಜನವರಿ 2ರ ಬಳಿ ಕ 18 ವರ್ಷ ಪೂರ್ಣಗೊಂಡಿರುವ ಮತ್ತು 2020ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6ರಲ್ಲಿ ಅರ್ಜಿಯನ್ನು ಸ್ವೀಕರಿಸಲಿದ್ದು, ಈ ಸಂಬಂಧ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳ ಪ್ರಮುಖರಲ್ಲಿ ಜಿಲ್ಲಾಧಿಕಾರಿ ಅವರು ಕೋರಿದರು.

ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

Advertisement

ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8ಎರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.

ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ನಮೂನೆ-6ಎರಲ್ಲಿ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ವೆಬ್‌ಸೈಟ್‌ನಲ್ಲಿಯೂ ಸಹ ನಮೂನೆ-6,7,8 ಮತ್ತು 8ಎ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಬಹುದಾಗಿದೆ ಎಂದರು.

ಮತಗಟ್ಟೆವಾರು ಬೂತ್‌ ಮಟ್ಟದ ಏಜೆಂಟರುಗಳನ್ನು ನೇಮಕ ಮಾಡಿರುವ ಬಗ್ಗೆ ರಾಜಕೀಯ ಪಕ್ಷಗಳು ಬೂತ್‌ ಮಟ್ಟದ ಏಜೆಂಟರ ಹೆಸರು ವಿವರಗಳನ್ನು ಮತಗಟ್ಟೆವಾರು ನೀಡುವಂತೆ ಅವರು ಮನವಿ ಮಾಡಿದರು.

ಪ್ರಸ್ತುತ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 543 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಾಲಿ ಇರುವ ಮತಗಟ್ಟೆಗಳನ್ನು ಬದಲಾವಣೆ ಮಾಡಬೇಕಾಗಿದ್ದಲ್ಲಿ ರಾಜಕೀಯ ಪಕ್ಷಗಳು ಮಾಹಿತಿಯನ್ನು ನೀಡಿದ್ದಲ್ಲಿ ಪರಿಶೀಲನೆ ಮಾಡಿ ಮತಗಟ್ಟೆ ಬದಲಾವಣೆ ಮಾಡಲು ಕ್ರಮವಹಿಸಲಾಗುವುದು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಹೆಚ್ಚು ಆರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮತ್ತು ಮೃತ,ಸ್ಥಳಾಂತರ,ಪುನರಾವರ್ತನೆಯಾಗಿರುವ ಮತದಾರ ರನ್ನು ಕೈಬಿಡಲು ಅಗತ್ಯ ಸಹಕಾರ ನೀಡುವಂತೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಕೋರಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ|ಸ್ನೇಹಾ,ಉಪ ವಿಭಾಗಾಧಿಕಾರಿ ಟಿ. ಜವರೇಗೌಡ ಚುನಾವಣಾ ತಹಶೀಲ್ದಾರ್‌ ಕುಸುಮಾ, ಜಿಲ್ಲಾಧಿಕಾರಿಗಳ ಕಚೇರಿಯ ಅನಿಲ್‌ ಕುಮಾರ್‌ ಇತರರು ಉಪ ಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next