ರಾಮನಗರ: ಸೆ.19ರಂದು ಹಮ್ಮಿಕೊಳ್ಳಲಾಗುವ ಮೆಗಾ ಇ-ಲೋಕ್ ಅದಾಲತ್‌ನಲ್ಲಿ, ಇತ್ಯ ರ್ಥವಾಗದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯ ಮೂರ್ತಿ ಅರವಿಂದ್ ಕುಮಾರ ತಿಳಿಸಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸ್ಥಳೀಯ ಕಾನೂನು ಸೇವೆ ಗಳ ಪ್ರಾಧಿಕಾರದ ಪದಾಧಿ ಕಾರಿ ಗಳು, ನ್ಯಾಯಾಧೀಶರನ್ನು ಒಳಗೊಂಡ ಸಭೆಯಲ್ಲಿ ಮಾತನಾಡಿದರು.
ಇ-ಅದಾಲತ್: ಕೋವಿಡ್ ಹಿನ್ನೆಲೆಯಲ್ಲಿ ಕಳೆದ 6 ತಿಂಗಳ ಕಾಲ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಮೂಲಕ ಯಾವುದೇ ರೀತಿಯ ಪ್ರಕರಣ ಇತ್ಯರ್ಥಪಡಿಸಲು ಸಾಧ್ಯ ವಾಗಿಲ್ಲ. ಹೀಗಾಗಿ ಕಕ್ಷಿದಾರರು ನ್ಯಾಯಾಲಯಕ್ಕೆ ಬಾರದೇ ಮನೆಯ ಲ್ಲಿಯೇ ಕುಳಿತು ಇಲ್ಲವೇ ವಕೀಲರ ಕಚೇರಿಯಲ್ಲಿ ಕುಳಿತು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
ಮೊಬೈಲ್ ಮೂಲಕ ದಾಖಲೆ ಅಪ್‌ಲೋಡ್!: ಕರ್ನಾಟಕ ಹೈಕೋರ್ಟ್ ಲೀಗಲ್ ಸರ್ವೀಸಸ್ ಕಮಿಟಿ ಅಧ್ಯಕ್ಷ ಆರಾಧ್ಯ, ಸಣ್ಣ ಪುಟ್ಟ ಪ್ರಕರಣಗಳಿದ್ದಲ್ಲಿ ಇನ್ನು ಮುಂದೆ ಕೋರ್ಟ್ ಗಳಿಗೆ ಅಲೆದಾಡುವ ಅಗತ್ಯವಿಲ್ಲ. ವಕೀಲರ ಕಚೇರಿ ಇಲ್ಲವೇ ಮನೆಯಲ್ಲಿಯೇ ಇದ್ದು, ಮೊಬೈಲ್ ಆ್ಯಪ್ ಮೂಲಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿದರೆ ಅವರಿಗೆ ನ್ಯಾಯ ದೊರಕಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದರು. ವಿಡಿಯೋ ಕಾನ್ಫರೆನ್ಸ್ ನಂತರ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ. ರಮಾ,ಇ-ಲೋಕ್ ಅದಾಲತ್‌ಗೆ ಸೆ.18 ವರೆಗೆ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಸೆ.19 ರಂದು ಏಕ ಕಾಲಕ್ಕೆ ಇ-ಲೋಕ್‌ಅದಾಲತ್ ನಡೆಸಲಾಗುತ್ತಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದ ಮೇರೆಗೆ ರಾಮನಗರ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
4624 ಪ್ರಕರಣ ಇತ್ಯ ರ್ಥ ಗುರಿ : ಜಿಲ್ಲೆಯಲ್ಲಿ ಒಟ್ಟು 39,680 ಪ್ರಕರಣಗಳಿದ್ದು, ಇವುಗಳ ಪೈಕಿ 4624 ಪ್ರಕರಣಗಳನ್ನು ಮೆಗಾ ಇ-ಲೋಕ್ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವುದು. ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಅಪಘಾತ, ಪರಿಹಾರ ವ್ಯಾಜ್ಯ, ಆಸ್ತಿ ಸಂಬಂಧಿತ, ಕೌಟುಂಬಿಕ ಪ್ರಕರಣ, ವಿಮೆ, ಹಣಕಾಸು ವ್ಯಾಜ್ಯ, ಸಣ್ಣ ಪುಟ್ಟ ಸಿವಿಲ್ ವ್ಯಾಜ್ಯ, ಲೇವಾದೇವಿ, ಬಾಡಿಗೆ, ಅಪಘಾತ ಪರಿಹಾರ, ವಾಹನ ವಿಮಾ ಕಂತು ಬಾಕಿ, ಭೂಮಿ ಖರೀದಿ ಸಂಬಂಧಿತ ಪ್ರಕರಣಗಳನ್ನು ರಾಜೀಗಾಗಿ ನಿಗದಿಪಡಿ ಸಲಾಗಿದೆ. ಇದರ ಲಾಭ ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ.ವೆಂಕಟಪ್ಪ ಮಾಹಿತಿ ನೀಡಿದ್ದಾರೆ.