Advertisement
ಜಿಲ್ಲೆಯ ಎಲ್ಲಾ ಕೋರ್ಟ್‌ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ, ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಲಕ್ಷ್ಮೀಕಾಂತ್ ಜೆ.ಮಿಸ್ಟಿನ್ ತಿಳಿಸಿದರು.
Related Articles
Advertisement
ಹಾಗಾಗಿ, ಕೋರ್ಟ್‌ಗಳಲ್ಲಿ ಪ್ರಕರಣ ಹೊಂದಿರುವ ಸಾರ್ವಜನಿಕರು ಅದಾಲತ್ ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಆರ್ಥಿಕ ವಸೂಲಾತಿ, ಉದ್ಯೋಗ ದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್, ನೀರಿನ ಶುಲ್ಕಗಳು, ಜೀವನಾಂಶ ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧ, ವೈವಾಹಿಕ, ಕುಟುಂಬ ಹಾಗೂ ಇತರೆ ಸಿವಿಲ್ ಪ್ರಕರಣ ಗಳು) ಅದಾಲತ್‌ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.