Advertisement

ಡಿ.19ಕೆ ಮೆಗಾ ಲೋಕ ಅದಾಲತ್‌

06:35 PM Nov 13, 2020 | Suhan S |

ರಾಮನಗರ: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಡಿ. 19ರಂದು ನಡೆಯುವ ಮೆಗಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಿ.ರಮಾ ಜಿಲ್ಲೆಯ ನಾಗರೀಕರಿಗೆ ಸಲಹೆ ನೀಡಿದ್ದಾರೆ.

Advertisement

ಜಿಲ್ಲೆಯಲ್ಲಿ ಮೆಗಾ ಲೋಕ ಅದಾಲತ್‌ ಅನುಷ್ಠಾನ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾದ್ಯಂತ ಇರುವ 18 ಬೆಂಚ್‌ಗಳಲ್ಲಿ ಲೋಕ ಅದಾಲತ್‌ ಕಾರ್ಯಕ್ರಮ ಆಯೋಜಿಸ ಲಾಗಿದೆ.ರಾಜಿ ಸಂದಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಇದರ ಲಾಭ ವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದರು.

ಆನ್‌ಲೈನ್‌: ಲೋಕ ಅದಾಲತ್‌ಗೆ ಡಿ.18 ವರೆಗೆ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಡಿ.19  ರಂದು ಏಕ ಕಾಲಕ್ಕೆ ರಾಮನಗರ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಕಕ್ಷಿದಾರರನ್ನು ಹೊರತು ಪಡಿಸಿ ದರೆ, ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಹುದು. ಆನ್‌ಲೈನ್‌ ಮೂಲಕವೂಭಾಗವಹಿಸಬಹುದು. ಅವಶ್ಯಕತೆ ಕಂಡು ಬಂದಲ್ಲಿ ಕಕ್ಷಿದಾರರನ್ನು ಆನ್‌ಲೈನ್‌ ಮೂಲಕ ಸಂಪರ್ಕಿಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

 2,805 ರಾಜಿ ಪ್ರಕರಣಗಳು ಅರ್ಹ: ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಬಿ. ವೆಂಕಟಪ್ಪ ಮಾತನಾಡಿ, ಜಿಲ್ಲೆ ಯಲ್ಲಿ ಒಟ್ಟು 42704 ಪ್ರಕರಣಗಳು ಬಾಕಿ ಇದೆ. ಇವುಗಳ ಪೈಕಿ 2,805 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸಲಾಗುವುದು. ನ್ಯಾಯಾಲಯದಲ್ಲಿಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಅಪಘಾತ, ಕಂತು ಕಟ್ಟದಿರು ವುದು, ಪರಿಹಾರ ವ್ಯಾಜ್ಯ, ಆಸ್ತಿ ಸಂಬಂಧಿತ, ಕೌಟುಂಬಿಕ ಪ್ರಕರಣ, ವಿಮೆ, ಹಣಕಾಸು ವ್ಯಾಜ್ಯ, ಸಣ್ಣ ಪುಟ್ಟ ಸಿವಿಲ್  ವ್ಯಾಜ್ಯ, ಲೇವಾದೇವಿ, ಬಾಡಿಗೆ, ಅಪಘಾತ ಪರಿಹಾರ, ವಾಹನ ವಿಮಾ ಕಂತು ಬಾಕಿ, ಭೂಮಿ ಖರೀದಿ ಸಂಬಂಧಿತ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್‌-19: ಕಳೆದ ಕೆಲವು ತಿಂಗಳಿಂದ ಕೋವಿಡ್‌ ಸೋಂಕಿನ ಹಿನ್ನೆಲೆಯಲ್ಲಿ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥ್ಯಪಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಡಿ.19ರಂದು ಆನ್‌ ಲೈನ್‌ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ನ್ಯಾಯಾಲಯಕ್ಕೆ ಬರದೆ ಒಂದೇ ಒಂದು ಬಾರಿಗೆ ನ್ಯಾಯಸಮ್ಮತವಾಗಿ ರಾಜಿ ಇಲ್ಲವೆ ಸಂಧಾ ನದ ಮೂಲಕ ಇವುಗಳನ್ನು ಹೆಚ್ಚಿನ ಶುಲ್ಕವಿಲ್ಲದೆ ಎರಡೂ ಕಡೆಯವರು ಆನ್‌ಲೈನ್‌ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ನ್ಯಾಯಾಧೀಶರು ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next