Advertisement

ಆ. 14ರಂದು ಮೆಗಾ ಲೋಕ ಅದಾಲತ್‌: ನ್ಯಾ|ಸುಬ್ರಹ್ಮಣ್ಯ

12:36 PM Jul 17, 2021 | Team Udayavani |

ಕಲಬುರಗಿ: ಎಲ್ಲ ವರ್ಗದ ಕಕ್ಷಿದಾರರ ಅನುಕೂಲಕ್ಕಾಗಿ ಹಾಗೂ ರಾಜೀ ಮೂಲಕ ಪ್ರಕರಣಗಳ ಇತ್ಯರ್ಥಕ್ಕಾಗಿ ಮುಂದಿನ ಆಗಸ್ಟ್‌ 14ರಂದು ಮೆಗಾ ಲೋಕ್‌ ಅದಾಲತ್‌ ನಡೆಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ  ಕಾರದ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾ ಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ ಕಲಬುರಗಿ, ಆಳಂದ, ಅಫಜಲಪುರ, ಚಿಂಚೋಳಿ, ಚಿತ್ತಾಪುರ, ಜೇವರ್ಗಿ, ಸೇಡಂ ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಗಾ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದರು.

ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣ, ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ಪರಿಗಣಿಸಿ ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬಂ  ಧಿಸಿದ ಪ್ರಕರಣಗಳು, ಭೂಸ್ವಾ ಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ, ಕಾನೂನಿನ್ವಯ ರಾಜೀ ಆಗಬಹುದಾದ ಎಲ್ಲ ತರಹದ ಪ್ರಕರಣಗಳನ್ನು ಅದಾಲತ್‌ ನಲ್ಲಿ ಇತ್ಯರ್ಥಪಡಿಸಲಾಗುವುದು ಎಂದರು. ಕಕ್ಷಿದಾರರು ಖುದ್ದಾಗಿ ಇಲ್ಲವೇ ಆನ್‌ಲೈನ್‌, ವಿಡಿಯೋ ಕಾನ್ಫ ರೆನ್ಸ್‌, ಇ ಮೇಲ್‌, ಎಸ್‌ಎಂಎಸ್‌, ವಾಟ್ಸ್‌ ಆ್ಯಪ್‌, ಎಲೆಕ್ಟ್ರಾನಿಕ್‌ ಮೋಡ್‌ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಲೋಕ ಅದಾಲತ್‌ ಮೂಲಕ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸುವರ್ಣ ಅವಕಾಶವಾಗಿದೆ ಎಂದು ಹೇಳಿದರು. ಮೆಗಾಲೋಕ್‌ ಅದಾಲತ್‌ ನಲ್ಲಿ ರಾಜೀ ಸಂಧಾನ ಮಾಡಿಕೊಳ್ಳುವುದರಿಂದ ಕಕ್ಷಿದಾರರ ಸಮಯ, ಹಣ ಉಳಿತಾಯ ಆಗುವುದಲ್ಲದೇ ಪರಸ್ಪರ, ಸಾಮರಸ್ಯ ಮುಂದುವರಿಯುತ್ತದೆ.

ಆದ್ದರಿಂದ ಆಗಸ್ಟ್‌ 14 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಯುವ ಮೆಗಾ ಲೋಕ್‌ ಅದಾಲತ್‌ನ ಸದುಪಯೋಗ ಪಡೆದುಕೊಳ್ಳುವಂತೆ, ಕಕ್ಷಿದಾರರು ಹಾಗೂ ಸಾರ್ವಜನಿಕರಲ್ಲಿ ಕೋರಲಾಗಿದೆ. ಕಳೆದ ಮಾರ್ಚ್‌ ತಿಂಗಳಲ್ಲಿ ನಡೆದ ಲೋಕ್‌ ಅದಾಲತ್‌ 27094 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಈಗಲೂ ಹೆಚ್ಚಿನ ಪ್ರಕರಣಗಳು ಇತ್ಯರ್ಥಗೊಳ್ಳಬೇಕೆಂಬ ನಿರೀಕ್ಷೆ ಹೊಂದಲಾಗಿದೆ ಎಂದು ನ್ಯಾಯಾ ಧೀಶ ಕೆ. ಸುಬ್ರಹ್ಮಣ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಕಕ್ಷಿದಾರರು ಹಾಗೂ ಸಾರ್ವಜನಿಕರು ಲೋಕ ಅದಾಲತ್‌ ಸದುಪಯೋಗ ಮಾಡಿಕೊಳ್ಳಲು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಜಿಲ್ಲೆಯಲ್ಲಿರುವ ಯಾವುದೇ ತಾಲೂಕು ಸೇವಾ ಸಮಿತಿ ಸಂಪರ್ಕಿಸಬಹುದು ಎಂದು ಹೇಳಿದರು. ಹಿರಿಯ ಸಿವಿಲ್‌ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರ ಸದಸ್ಯ ಕಾರ್ಯದರ್ಶಿ ಸುಶಾಂತ ಮಹಾವೀರ ಚೌಗಲೆ ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next