Advertisement

ದೆಹಲಿಯಲ್ಲಿ ಇಂದು ಕೇಜ್ರಿವಾಲ್ ನೇತೃತ್ವದಲ್ಲಿ ಮೆಗಾ ಸಮಾವೇಶ

04:17 AM Feb 13, 2019 | Team Udayavani |

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯನ್ನು ಶತಾಯಗತಾಯ ಕಟ್ಟಿಹಾಕಬೇಕೆಂದು ದೃಢ ನಿರ್ಧಾರ ಮಾಡಿರುವ ವಿರೋಧ ಪಕ್ಷಗಳು ‘ಮಹಾಘಟಬಂಧನ್’ ಹೆಸರಿನಲ್ಲಿ ಒಟ್ಟಾಗಿವೆ. ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು, ದೇವೇಗೌಡ, ಅರವಿಂದ ಕೇಜ್ರಿವಾಲ್, ಮಾಯಾವತಿ ಮೊದಲಾದ ಘಟಾನುಘಟಿ ನಾಯಕರು ಒಂದೇ ವೇದಿಕೆಯಲ್ಲಿ ಒಟ್ಟಾಗುತ್ತಿದ್ದಾರೆ. ಇದಕ್ಕೆ ಇನ್ನಷ್ಟು ಬಲತುಂಬಲು ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಆಮ್ ಆದ್ಮಿ ಪಕ್ಷ ಆಯೋಜಿಸಿರುವ ‘ಮಹಾ ಸಮಾವೇಶ’ದಲ್ಲಿ ತೃತೀಯರಂಗದ ಘಟಾನುಘಟಿಗಳು ಒಂದಾಗುತ್ತಿದ್ದಾರೆ.

Advertisement

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪಕ್ಷದ ವತಿಯಿಂದ ಆಯೋಜಿಸಿರುವ ಈ ಸಮಾವೇಶದಲ್ಲಿ ಮಮತಾ ಬ್ಯಾನರ್ಜಿ, ಎನ್. ಚಂದ್ರಬಾಬು ನಾಯ್ಡು, ಹೆಚ್.ಡಿ. ದೇವೇಗೌಡ, ನ್ಯಾಷನಲ್ ಕಾನ್ಫೆರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಶರದ್ ಪವಾರ್ ಸಹಿತ ಸಮಾಜವಾದಿ ಪಕ್ಷ, ಡಿ.ಎಂ.ಕೆ., ರಾಷ್ಟ್ರೀಯ ಜನತಾ ದಳ, ರಾಷ್ಟ್ರೀಯ ಲೋಕ ದಳಗಳ ನಾಯಕರು ಸಹಿತ ಇತರೇ ವಿರೋಧಿ ಬಣದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ನರೇಂದ್ರ ಮೋದಿ ಮತ್ತು ಬಿ.ಜೆ.ಪಿ.ಗೆ ಪರ್ಯಾಯ ಶಕ್ತಿಯನ್ನು ಕಟ್ಟುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸುತ್ತಿರುವುದರಿಂದ ಈ ಸಭೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಆಹ್ವಾನವನ್ನು ನೀಡಲಾಗಿದೆ. ಆದರೆ ರಾಹುಲ್ ಅವರ ಭಾಗವಹಿಸುವಿಕೆಗೆ ಸ್ಥಳೀಯ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ಲೋಕ ಸಮರಕ್ಕಾಗಿ ಆಮ್ ಆದ್ಮಿ ಮತ್ತು ಕಾಂಗ್ರೆಸ್ ನಡುವೆ ಸೀಟು ಹೊಂದಾಣಿಕೆಯ ಮಾತುಕತೆಗಳು ನಡೆಯುತ್ತಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next