Advertisement

ಮೆಗಾಸ್ಟಾರ್ ಚಿರಂಜೀವಿಗೆ ಕೋವಿಡ್ -19 ಪಾಸಿಟಿವ್

01:47 PM Nov 09, 2020 | keerthan |

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ, ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ಅವರೇ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

Advertisement

‘ಆಚಾರ್ಯ’ ಚಿತ್ರದ ಶೂಟಿಂಗ್ ಗೂ ಮೊದಲು ಚಿರಂಜೀವಿ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಇದರ ವರದಿ ಬಂದಿದ್ದು, ಕೋವಿಡ್ ಪಾಸಿಟಿವ್ ವರದಿಯಾಗಿದೆ.

ಇದನ್ನೂ ಓದಿ:ಪೋಷಕರೇ ಎಚ್ಚರ: ಅಪರಿಚಿತ ಕರೆ-ಮಗನ ಕೈಯಲ್ಲಿ ಫೋನ್ ಕೊಟ್ಟು 9 ಲಕ್ಷ ರೂ. ಕಳೆದುಕೊಂಡ ತಂದೆ!

ಸದ್ಯ ಚಿರಂಜೀವಿ ಹೋಮ್ ಕ್ವಾರೆಂಟೈನ್​ನಲ್ಲಿದ್ದಾರೆ. ಐದು ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ದಯವಿಟ್ಟು ಅವರೆಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಆರೋಗ್ಯದತ್ತ ಜಾಗ್ರತೆ ವಹಿಸಿ’ ಎಂದು ಚಿರಂಜೀವಿ ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next