Advertisement

ಕಾಂಗ್ರೆಸ್ ಗೆ ಆಘಾತ: ಮಾಜಿ ಸಿಎಂ ಸೇರಿ 11 ಮಂದಿ ಶಾಸಕರು ಟಿಎಂಸಿ ಸೇರ್ಪಡೆ!

08:41 AM Nov 25, 2021 | Team Udayavani |

ಶಿಲ್ಲಾಂಗ್: ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು 11 ಮಂದಿ ಶಾಸಕರು ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್‌ ಗೆ ಸೇರ್ಪಡೆಗೊಂಡಿದ್ದು, ಕಾಂಗ್ರೆಸ್‌ಗೆ ಭಾರೀ ಆಘಾತವಾಗಿದೆ. ಈ ನಡೆಯೊಂದಿಗೆ 17 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ತೃಣಮೂಲಕ್ಕೆ ಸೇರ್ಪಡೆಯಾಗಿದ್ದಾರೆ.

Advertisement

ರಾಹುಲ್ ಗಾಂಧಿ ಅವರು ಮೇಘಾಲಯದ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿನ್ಸೆಂಟ್ ಎಚ್ ಪಾಲಾ ಅವರನ್ನು ತಮ್ಮ ಬೇಡಿಕೆಗಳ ಕುರಿತು ಭೇಟಿಯಾದ ಒಂದು ತಿಂಗಳ ನಂತರ ಈ ಪ್ರಸಂಗ ನಡೆದಿದೆ.

ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ವಿನ್ಸೆಂಟ್ ಹೆಚ್ ಪಾಲಾ ಅವರು ಮೇಘಾಲಯ ಘಟಕದ ಹೊಸ ಮುಖ್ಯಸ್ಥರಾಗಿ ನೇಮಕಗೊಂಡಾಗಿನಿಂದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಕುಲ್ ಎಂ ಸಂಗ್ಮಾ ನಡುವೆ ಬಿರುಕು ಮೂಡಿತ್ತು.

ಇದನ್ನೂ ಓದಿ:ಇನ್ನೆರಡು ಬ್ಯಾಂಕ್‌ ಖಾಸಗಿಗೆ? ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ

ಪಾಲಾ ಅವರ ನೇಮಕದ ಬಗ್ಗೆ ಪಕ್ಷದ ನಾಯಕತ್ವವು ತನ್ನನ್ನು ಸಂಪರ್ಕಿಸಿಲ್ಲ ಎಂದು ಸಂಗ್ಮಾ ಹೇಳಿದ್ದರು. ಸಂಗ್ಮಾ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಬಹುದು ಎಂಬ ಊಹಾಪೋಹವಿತ್ತು. ಆದಾಗ್ಯೂ, ಉಭಯ ನಾಯಕರು ಶನಿವಾರ ಒಟ್ಟಿಗೆ ಬಂದು ಮುಂಬರುವ ಉಪಚುನಾವಣೆಗೆ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದರು.

Advertisement

ಟಿಎಂಸಿ ಪರವಾಗಿ ಪ್ರಶಾಂತ್ ಕಿಶೋರ್ ಅವರ ತಂಡದ ಸದಸ್ಯರು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next