Advertisement

“ರ್‍ಯಾಂಬೋ 2′ಹಾಡಿಗೆ “ಬಿಟ್ಟೋಗ್ಬೇಡ’ಅಂದ್ರು ಮೆಹಬೂಬ್​ ಸಾಬ್

02:51 PM Apr 03, 2018 | |

ಶರಣ್ ಅಭಿನಯದ “ರ್‍ಯಾಂಬೋ 2′ ಚಿತ್ರವು ಬಿಡುಗಡೆಗೆ ಸಜ್ಜಾಗಿದ್ದು, ಈಗಾಗಲೇ ಚಿತ್ರದ “ಧಮ್​ ಮಾರೋ ಧಮ್’, “ಯವ್ವ- ಯವ್ವ’ ಹಾಗೂ “ಚುಟು ಚುಟು ಅಂತೈತಿ’ ಹಾಡುಗಳು ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ನಡುವೆ ಚಿತ್ರತಂಡ ಗಾಯಕ ಮೆಹಬೂಬ್​ ಸಾಬ್ ಗಾಯನದ “ಬಿಟ್ಟೋಗ್ಬೇಡ’ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದ್ದು, ಐದು ಲಕ್ಷಕ್ಕೂ ಹೆಚ್ಚು ಜನ ಈ ಹಾಡನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.

Advertisement

ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿದ್ಧವಾಗಿರೋ ಈ ಹಾಡಿಗೆ ಸಂತೋಷ್​ ನಾಯ್ಕ್​ ಮತ್ತು ಗೌಸ್​ ಪೀರ್​ ಸಾಹಿತ್ಯ ಬರೆದಿದ್ದಾರೆ. ಇನ್ನು ಶರಣ್‌ ತಮ್ಮ ಲಡ್ಡು ಸಿನಿಮಾ ಬ್ಯಾನರ್‌ನಡಿ ಈ ಚಿತ್ರವು ಬಿಡುಗಡೆಯಾಗುತ್ತಿದ್ದು, ಚಿತ್ರದ ನಿರ್ಮಾಣದಲ್ಲಿ ಅಟ್ಲಾಂಟ ನಾಗೇಂದ್ರ ಹಾಗೂ ಚಿತ್ರಕ್ಕೆ ಕೆಲಸ ಮಾಡುವ ತಂತ್ರಜ್ಞರು ಕೈ ಜೋಡಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಛಾಯಾಗ್ರಾಹಕ ಸುಧಾಕರ್‌ ರಾಜ್‌, ಸಂಕಲನಕಾರ ಕೆ.ಎಂ. ಪ್ರಕಾಶ್‌, ಕಲಾ ನಿರ್ದೇಶಕ ಮೋಹನ್‌ ಬಿ ಕೆರೆ, ಕ್ರಿಯೇಟಿವ್‌ ಹೆಡ್‌ ತರುಣ್‌ ಸುಧೀರ್‌ ಇವರೆಲ್ಲಾ ವರ್ಕಿಂಗ್‌ ಪಾಟ್ನರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಿಂದ ಬಂದ ಲಾಭದಲ್ಲಿ ಎಲ್ಲರಿಗೂ ಶೇರ್‌ ಸಿಗಲಿದೆಯಂತೆ. ಈ ಹಿಂದೆ “ದಿಲ್‌ವಾಲ’ ಚಿತ್ರ ಮಾಡಿದ್ದ ಅನಿಲ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶರಣ್‌ಗೆ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next