ಶ್ರೀನಗರ: ಗುಪ್ಕಾರ್ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ಜಮ್ಮು-ಕಾಶ್ಮೀರ ಸರ್ಕಾರ ಮಾಜಿ ಮುಖ್ಯಮಂತ್ರಿ, ಪೀಪಲ್ಸ್ ಡೆಮೋಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬ್ ಮುಫ್ತಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಂಜೇಶ್ವರ: ಪೆಂಡಾಲ್ ಕುಸಿದು ಬಿದ್ದು 30 ವಿದ್ಯಾರ್ಥಿಗಳಿಗೆ ಗಾಯ
ಮುಫ್ತಿ ತಂದೆ ಮುಫ್ತಿ ಮುಹಮ್ಮದ್ ಸಯೀದ್ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ(2005ನೇ ಇಸವಿ) ಸಂದರ್ಭದಿಂದ ಈವರೆಗೂ ಮೆಹಬೂಬಾ ಕುಟುಂಬ ಫೇರ್ ವೀವ್ ಸರ್ಕಾರಿ ಬಂಗಲೆಯಲ್ಲಿ ವಾಸವಾಗಿದ್ದರು. ಇದೀಗ ಕೇಂದ್ರಾಡಳಿತ ಪ್ರದೇಶವಾಗಿದ್ದು, ಮುಫ್ತಿ ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
2020ರಲ್ಲಿ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನದ ಕಲಂ 371 ರದ್ದುಪಡಿಸಿದ ನಂತರ ಮಾಜಿ ಮುಖ್ಯಮಂತ್ರಿ ಸರ್ಕಾರಿ ಬಂಗಲೆಯಲ್ಲಿ ಹೆಚ್ಚು ಕಾಲ ವಾಸ್ತವ್ಯ ಹೂಡುವಂತಿಲ್ಲ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಬಂಗಲೆಯನ್ನು ತೊರೆಯುವಂತೆ ನೋಟಿಸ್ ಬಂದಿರುವುದನ್ನು ಮೆಹಬೂಬಾ ಮುಫ್ತಿ ಖಚಿತಪಡಿಸಿದ್ದಾರೆ. ಅಷ್ಟೇ ಅಲ್ಲ ಮೆಹಬೂಬಾ ಮುಫ್ತಿಗೆ ಪರ್ಯಾಯ ನಿವಾಸ ಕೊಡುವುದಾಗಿಯೂ ಆಫರ್ ನೀಡಲಾಗಿದೆ ಎಂದು ಮೂಲಗಳು ಹೇಳಿವೆ.