Advertisement

Anantnag: ಜಮ್ಮು- ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ತೆರಳುತ್ತಿದ್ದ ಕಾರು ಅಪಘಾತ

04:02 PM Jan 11, 2024 | Suhan S |

ಶ್ರೀನಗರ:  ಪಿಡಿಪಿ ಮುಖ್ಯಸ್ಥೆ, ಜಮ್ಮು‍& ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಗುರುವಾರ(ಜ.11 ರಂದು) ನಡೆದಿದೆ.

Advertisement

ಮೆಹಬೂಬಾ ಮುಫ್ತಿ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಬೆಂಕಿ ಘಟನೆಯ ಸಂತ್ರಸ್ತರನ್ನು ಭೇಟಿ ಮಾಡಲು ಖಾನಬಾಲ್‌ಗೆ ತೆರಳಿ, ನಿಗದಿಯಾಗಿದ್ದ ಮುಂದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಮತ್ತೊಂದು ಕಾರಿಗೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಅದೃಷ್ಟವಶಾತ್‌ ಮೆಹಬೂಬಾ ಮುಫ್ತಿ ಅವರು ಅಪಘಾತದಿಂದ ಪಾರಾಗಿದ್ದಾರೆ ಎಂದು ಅಧಿಕಾರಿ ಹೇಳಿರುವುದಾಗಿ ವರದಿ ತಿಳಿಸಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next