Advertisement

ಕೇಂದ್ರ ಸರ್ಕಾರವು ಉಗ್ರರ ಹೆಸರಿನಲ್ಲಿ ನಾಗರಿಕರನ್ನು ಕೊಲ್ಲುತ್ತಿದೆ: ಮೆಹಬೂಬಾ ಮುಫ್ತಿ

10:01 AM Nov 18, 2021 | Team Udayavani |

ಹೊಸದಿಲ್ಲಿ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ಗೃಹಬಂಧನಕ್ಕೆ ಒಳಪಡಿಸಲಾಗಿದೆ. ಬುಧವಾರ ಶ್ರೀನಗರದಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಮೆಹಬೂಬಾ ಮುಫ್ತಿ ಅವರು ಹೈದರಾಪೊರಾ ಎನ್ ಕೌಂಟರ್ ವಿರುದ್ಧ ಜಮ್ಮುವಿನಲ್ಲಿ ಪ್ರತಿಭಟನೆ ನಡೆಸಿದ್ದರು. ನಂತರ ಅವರು ಇದೇ ವಿಚಾರಕ್ಕೆ ಸಂಬಂಧಿಸಿ ಶ್ರೀನಗರದ ಪ್ರೆಸ್ ಕಾಲೊನಿಯಲ್ಲಿ ಪ್ರತಿಭಟನೆಗೆ ಸಜ್ಜಾಗಿದ್ದರು. ಈ ಕಾರಣದಿಂದ ಅವರನ್ನು ಗೃಹಬಂಧನಕ್ಕೆ ಒಳಪಡಿಸಲಾಗಿದೆ ಎಂದು ವರದಿ ತಿಳಿಸಿದೆ.

“ಈ ಸರ್ಕಾರವು ಉಗ್ರಗಾಮಿಗಳ ಹೆಸರಿನಲ್ಲಿ ನಾಗರಿಕರನ್ನು ಕೊಲ್ಲುವ ಕಾರಣದಿಂದ ನಾನು ಪ್ರತಿಭಟನೆ ನಡೆಸುತ್ತಿದ್ದೇನೆ. ಉಗ್ರಗಾಮಿಗಳನ್ನು ಕೊಲ್ಲುತ್ತಿದ್ದಾರೆಯೇ ಎಂದು ಯಾರಿಗೂ ತಿಳಿದಿಲ್ಲ. ಇತ್ತೀಚೆಗೆ ಮೂವರು ನಾಗರಿಕರು ಕೊಲ್ಲಲ್ಪಟ್ಟಿದ್ದಾರೆ. ಬೇಡಿಕೆಯ ಹೊರತಾಗಿಯೂ ನಾಗರಿಕರ ಮೃತ ದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲು ಸರ್ಕಾರ ನಿರಾಕರಿಸಿದೆ” ಎಂದು ಮುಫ್ತಿ ಹೇಳಿದ್ದಾರೆ.

ಇದನ್ನೂ ಓದಿ:ನ್ಯೂಜಿಲ್ಯಾಂಡ್ ಆಟಗಾರ ರಚಿನ್ ರವೀಂದ್ರ ಹೆಸರಿನ ಹಿಂದಿದೆ ರಾಹುಲ್-ಸಚಿನ್ ಅಭಿಮಾನದ ಗುಟ್ಟು

ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಹೈದರ್‌ಪೋರಾ ಎನ್‌ಕೌಂಟರ್ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ.

Advertisement

ನವೆಂಬರ್ 15 ರಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಹೈದರ್‌ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು, ಖಾಸಗಿ ಕಟ್ಟಡವೊಂದರಲ್ಲಿನ ಅಕ್ರಮ ಕಾಲ್ ಸೆಂಟರ್‌ನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ನಂತರ ದಾಳಿ ನಡೆಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next