Advertisement

Mehbooba Mufti: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥರಾಗಿ ಮೆಹಬೂಬಾ ಮುಫ್ತಿ ಮರು ಆಯ್ಕೆ

03:43 PM Oct 26, 2023 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರು ಮೂರು ವರ್ಷಗಳ ಅವಧಿಗೆ ಪಕ್ಷದ ಅಧ್ಯಕ್ಷರಾಗಿ ಗುರುವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

Advertisement

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಕೋರ್ ಕಮಿಟಿಯು ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಿತು. ಇದರಲ್ಲಿ ಪಕ್ಷದ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ವೀರಿ ಅವರು ಅಧ್ಯಕ್ಷ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ಹೆಸರನ್ನು ಪ್ರಸ್ತಾಪಿಸಿದರು. ಸದ್ಯದ ಪರಿಸ್ಥಿತಿಯಲ್ಲಿ ಸಂಘಟನೆಯನ್ನು ಗಟ್ಟಿಯಾಗಿ ಮತ್ತು ಒಗ್ಗಟ್ಟಿನಿಂದ ಇರಿಸಲು ಮೆಹಬೂಬಾ ಮುಫ್ತಿ ಮಾತ್ರ ಸಮರ್ಥರಾಗಿದ್ದಾರೆ ಎಂದು ಅವರು ಹೇಳಿದರು.

ಅವರ ನಾಯಕತ್ವದಲ್ಲಿ ಎಲ್ಲರಿಗೂ ನಂಬಿಕೆ ಇದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಲೋನ್ ಹಂಜೂರ ಕೂಡ ಅಬ್ದುಲ್ ರೆಹಮಾನ್ ವೀರಿ ಅವರ ಪ್ರಸ್ತಾಪವನ್ನು ಬೆಂಬಲಿಸಿದರು. ಇದಾದ ಬಳಿಕ ಸಭೆಯಲ್ಲಿದ್ದ ಇತರ ನಾಯಕರು ಕೂಡಾ ಬೆಂಬಲವನ್ನು ಸೂಚಿಸಿದರು. ಇದರೊಂದಿಗೆ ಮೆಹಬೂಬಾ ಮುಫ್ತಿ ಮತ್ತೊಮ್ಮೆ ಪಿಡಿಪಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾದರು.

ಜಮ್ಮು ಮತ್ತು ಕಾಶ್ಮೀರದ ಸಾಮಾಜಿಕ-ರಾಜಕೀಯ-ಆರ್ಥಿಕ ಹಿತಾಸಕ್ತಿ ಮತ್ತು ಜನರ ರಕ್ಷಣೆ ನನ್ನ ಗುರಿ ಎಂದು ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೆಹಬೂಬಾ ಮುಫ್ತಿ ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಗುರುತನ್ನು ರಕ್ಷಿಸುವುದು, ಶಾಂತಿ ಕಾಪಾಡುವುದು, ಇಲ್ಲಿರುವ ಸಮಸ್ಯೆಯನ್ನು ಬಗೆಹರಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

1999 ರಲ್ಲಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅನ್ನು ಸ್ಥಾಪಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ 2002 ರಲ್ಲಿ ಕಾಂಗ್ರೆಸ್ ನೊಂದಿಗೆ ಆ ಬಳಿಕ 2014 ರಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತು.

Advertisement

ಇದನ್ನೂ ಓದಿ: Tiger Claw Pendant Case: ವಿಜುಗೌಡ ಮನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Advertisement

Udayavani is now on Telegram. Click here to join our channel and stay updated with the latest news.

Next