ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಇಂದು (ಮಂಗಳವಾರ, ಸಪ್ಟೆಂಬರ್ 7) ಮತ್ತೆ ಗೃಹ ಬಂಧನದಲ್ಲಿ ಇರಿಸಲಾಗಿದೆ.
ಈ ಕುರಿತಾಗಿ ಸ್ವತಃ ಮುಫ್ತಿ ಅವರೇ ತಮ್ಮ ಅಧಿಕೃತ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ತನ್ನ ಗೃಹ ಬಂಧನದಿಂದ ಜಮ್ಮು ಹಾಗೂ ಕಾಶ್ಮೀರದ ವಸ್ತು ಸ್ಥಿತಿ ಏನೆಂಬುವುದು ಬಯಲಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ : ಗೋವಾದಲ್ಲಿ ಶೇ 100 ರಷ್ಟು ನಾಗರೀಕರಿಗೆ ಲಸಿಕೆ ನೀಡಿಕೆ: ಪ್ರಮೋದ್ ಸಾವಂತ್
ಪಿಡಿಪಿ (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ) ಯ ಮುಖ್ಯಸ್ಥೆ ಆಗಿರುವ, ಜುಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಸಹಜ ಸ್ಥಿತಿಗೆ ಮರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು. ಆ ಸಹಜ ಸ್ಥಿತಿ ಏನೆಂಬುದು ಎಲ್ಲರೆದುರು ಬಯಲಾಗಿದೆ ಎಂದಿದ್ದಾರೆ.
ಇನ್ನು, ಪ್ರಧಾನಿ ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ, ಅಫ್ಘಾನಿಸ್ತಾನದಲ್ಲಿರುವ ಜನರ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ. ಆದರೇ, ತಮ್ಮದೇ ದೇಶದ ಕಾಶ್ಮೀರಿಗಳಿಗೆ ಸಿಗಬೇಕಾದ ಹಕ್ಕುಗಳನ್ನು ನಿರಾಕರಿಸುತ್ತಿದೆ. ಇದು ಕೇಂದ್ರ ಸರ್ಕಾರದ ದಿವ್ಯ ನಿರ್ಲಕ್ಷ್ಯ ಧೋರಣೆ. ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಟ್ಟಿರುವುದರಿಂದ ನನ್ನನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಇದನ್ನೂ ಓದಿ : ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕಿ ಹಾಗೂ 14 ವರ್ಷದ ಮಗನ ಹತ್ಯೆ : ಪೊಲೀಸರಿಂದ ಶೋಧ ಕಾರ್ಯ