ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಲಾಗಿದೆ ಎಂಬ ಆರೋಪ ಸಂಬಂಧ ದಾಖಲಾದ ದೂರಿಗೆ ಸಂಬಂಧಪಟ್ಟಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.
ಖುದ್ದು ಹಾಜರಿ ಅಥವಾ ಅಥವಾ ಸಂದರ್ಭಾನುಸಾರ ವಕೀಲರ ಮೂಲಕ ಮೇ 24 ಮಂಗಳವಾರ ಬೆಳಗ್ಗೆ ಉತ್ತರಿಸಲು 42 ನೇ ಹೆಚ್ಚುವರಿ ಮೆಟ್ರೋಪಾಲಿಟನ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಮೇಕೆದಾಟು ಪಾದಯಾತ್ರೆ ವೇಳೆ ಕೊರೊನ ಮಾರ್ಗಸೂಚಿ ಜಾರಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದ ಸೋಂಕು ಹರಡುವಿಕೆ ಸಂದರ್ಭದಲ್ಲಿ ರಾಜಕಾರಣಿಗಳು ಜವಾಬ್ದಾರಿ ಮೆರೆದಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು.
ಕೊನೆಗೆ ಹೈಕೋರ್ಟ್ ನಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಪಾದಯಾತ್ರೆ ಗೆ ತಡೆ ಬಿದ್ದಿತ್ತು. ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜನ ಪ್ರತಿ ನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಇದನ್ನೂ ಓದಿ : ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ
ರಾಮನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದಾಖಲಾದ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು