Advertisement

ಮೇಕೆದಾಟು ಯೋಜನೆ ಜಾರಿ ಮಾಡಿಯೇ ಸಿದ್ದ : ಸಚಿವ ಬೊಮ್ಮಾಯಿ ಅಚಲ ವಿಶ್ವಾಸ

07:47 PM Jul 05, 2021 | sudhir |

ಬೆಂಗಳೂರು : ಕಾವೇರಿ ಕಣಿವೆಯಲ್ಲಿನ ಕರ್ನಾಟಕ ರಾಜ್ಯದ ರೈತರ ಹಕ್ಕಿನ ಸಲುವಾಗಿ ತಮಿಳುನಾಡು ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಹೋರಾಟದಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ಇದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

Advertisement

ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇಂದು-ನಿನ್ನೆಯದಲ್ಲ. ಹಲವಾರು ವರ್ಷಗಳ ಹಿಂದೆ ಈ ಯೋಜನೆ ಸಿದ್ಧವಾಗಿದೆ. ಇದು ವಿದ್ಯುತ್ಚ್ಛಕ್ತಿ, ಕುಡಿಯುವ ನೀರು ಮತ್ತು ಸಂಕಷ್ಟದ ವರ್ಷಗಳಲ್ಲಿ ಉಭಯ ರಾಜ್ಯಗಳ ನಡುವೆ ನೀರಿನ ಸಮರ್ಪಕ ನಿರ್ವಹಣೆ ಮಾಡಲು ಅನುಕೂಲವಾಗುವ ಯೋಜನೆಯಾಗಿದೆ. ಉಭಯ ರಾಜ್ಯಗಳಿಗೂ ಅನುಕೂಲವಾಗುವ ಈ ಯೋಜನೆಯನ್ನು ಜಾರಿ ಮಾಡಲು ನಾವು ಪ್ರಯತ್ನಿಸಿದ್ದರೆ ತಮಿಳುನಾಡು ಸರ್ಕಾರ ತಕರಾರು ತೆಗೆಯುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದ ಕಾವೇರಿ ಕಣಿವೆಯ ರೈತರ ಹಕ್ಕಿನ ಸಲುವಾಗಿ ನಾವು ಕಾನೂನು ಹೋರಾಟವನ್ನು ಸದಾಕಾಲ ಮಾಡುತ್ತಲೇ ಬಂದಿದ್ದೇವೆ. ನಮ್ಮ ಹಕ್ಕಿನ ಸಲುವಾಗಿ ಈಗಲೂ ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ನಮಗೆ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂಬ ವಿಶ್ವಾಸವಿದೆ ಎಂಬ ಭರವಸೆಯ ಮಾತುಗಳನ್ನು ಅವರು ಆಡಿದರು.

ಇದನ್ನೂ ಓದಿ :ಜಗದ್ಗುರು ಪೀಠಗಳ ಹಂಗಿಲ್ಲದೇ ಪಂಚಮಸಾಲಿ ಮಠಾಧೀಶರ ಒಕ್ಕೂಟ ರಚನೆಗೆ ನಿರ್ಧಾರ

ಮೆಜೆದಾಟು ಯೋಚನೆ ಕುರಿತು ಸುಪ್ರೀಂ ಕೋರ್ಟ್ ನೀಡುವ ತೀರ್ಪನ್ನು ಆಧರಿಸಿ ಕೇಂದ್ರ ಸರ್ಕಾರದಿಂದ ಬೇಕಾಗುವ ಎಲ್ಲಾ ಕ್ಲಿಯರೆನ್ಸ್ ಗಳನ್ನು ಪಡೆಯುತ್ತೇವೆ ಎಂದು ಅವರು ಹೇಳಿದರು.

Advertisement

ಕೇರಳ ಗಡಿ ಭಾಗದಲ್ಲಿ ಸ್ಯಾಟಲೈಟ್ ಫೋನ್ ಗಳ ಬಳಕೆ ಮೇಲೆ ಕಣ್ಣು ಇಟ್ಟಿದ್ದೇವೆ. ನಿರಂತರವಾಗಿ ನಿಗಾ ಇರಿಸಿದ್ದೇವೆ. ಕೆಲ ಪ್ರದೇಶಗಳಲ್ಲಿ ವಿಶೇಷವಾಗಿ ಅರಣ್ಯ ಪ್ರದೇಶದಲ್ಲಿ ರೇಡಗಳನ್ನು ಮಾಡಿದ್ದೇವೆ. ಅಕ್ರಮ ಅರಣ್ಯ ಸಂಪತ್ತು ಸಾಗಾಟವನ್ನು ಪತ್ತೆ ಮಾಡಿ ಕ್ರಮ ಕೈಗೊಂಡಿದ್ದೇವೆ.

-ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು

Advertisement

Udayavani is now on Telegram. Click here to join our channel and stay updated with the latest news.

Next