Advertisement

ಮೇಕೆದಾಟು: ತ.ನಾಡು ವಿರುದ್ಧ ಪ್ರತಿಭಟನೆ

12:26 PM Jul 20, 2021 | Team Udayavani |

ಚಾಮರಾಜನಗರ: ಮೇಕೆದಾಟು ಯೋಜನೆಗೆ ತಮಿಳುನಾಡು‌ ವಿರೋಧಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟಿಸಿದರು.

Advertisement

ನಗರದ ಚಾಮರಾಜೇಶ್ವರ ಉದ್ಯಾನದ ಆವರಣದಲ್ಲಿ ಸೇನೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ಕಟ್ಟಬೇಕು ಕಟ್ಟಬೇಕು ಮೇಕೆದಾಟು ಕಟ್ಟಬೇಕು. ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ ಹಾಗೂ ರಾಜ್ಯದ ಎಲ್ಲಾ ಸಂಸದರು ವಿರುದ್ದ ಘೋಷಣೆ ಕೂಗಿದರು.

ಈ ವೇಳೆ ನಿಜಧ್ವನಿ ಗೋವಿಂದರಾಜು, ಕರ್ನಾಟಕ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಚಾ.ಗು.ನಾಗರಾಜ್, ಜಿಲ್ಲಾಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಪಿ.ಎಚ್‌. ರಾಜು,ಗು.ಪುರುಷೋತ್ತಮ್, ತಾಂಡವಮೂರ್ತಿ, ನಂಜುಂಡ, ವೀರಭದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಾಲೆ ಶುಲ್ಕವಸೂಲಿವಿರೋಧಿಸಿಪ್ರತಿಭಟನೆ :

ಗುಂಡ್ಲುಪೇಟೆ: ಖಾಸಗಿ ಶಾಲೆಗಳು ಶಾಲಾ ಶುಲ್ಕ ಮತ್ತು ಡೊನೇಷನ್‌ ವಸೂಲಿಗೆ ಇಳಿದಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆ ಪದಾಧಿಕಾರಿಗಳು ಪ್ರತಿಭಟಿಸಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಜಯಕರ್ನಾಟಕ,ಕರ್ನಾಟಕಕಾವಲು ಪಡೆ ಮತ್ತು ಕರವೇ ಪ್ರವೀಣ್‌ ಶೆಟ್ಟಿ ಬಣದ ಪದಾಧಿಕಾರಿಗಳು ಮೆರವಣಿಗೆ ನಡೆಸಿ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದ ಮುಂಭಾಗ ರಾಷ್ಟ್ರೀಯ ಹೆದ್ದಾರಿ 76ರಲ್ಲಿಕೆಲ ಕಾಲ ರಸ್ತೆ ತಡೆದು ಪ್ರತಿಭಟಿಸಿದರು.

ಈ ವೇಳೆ ತಹಶೀಲ್ದಾರ್‌ ಸಿ.ಜಿ.ರವಿಶಂಕರ್‌ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಎಸ್‌.ಸಿ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಮಾಡ್ರಹಳ್ಳಿ ಮಹೇಶ್‌, ಪದಾಧಿಕಾರಿಗಳಾದ ಶ್ರೀನಿವಾಸ್‌, ಲೋಕೇಶ್‌,ಕಾವಲುಪಡೆ ತಾಲೂಕುಅಧ್ಯಕ್ಷಅಬ್ದುಲ್‌ಮಾಲಿಕ್‌, ಕಾರ್ಯಾಧ್ಯಕ್ಷ ಇಲಿಯಾಸ್‌, ಟೌನ್‌ ಉಪಾಧ್ಯಕ್ಷ ಸಾದಿಕ್‌ಪಾಷ, ಸಂಚಾಲಕರಾದ ಮಿಮಿಕ್ರಿರಾಜು, ರಾಜಿಕ್‌ಪಾಷ ಇತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next