Advertisement
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಕೈಗೊಂಡ ನಿರ್ಣಯಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಸಿದ್ದವಾಗಿರುವ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ. ಇದು ಹೆಚ್ಚುವರಿ ಕಾವೇರಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡುವ ಯೋಜನೆ. ಈ ಯೋಜನೆಯನ್ನು ಜಾರಿಗೊಳಿಸುವ ಎಲ್ಲಾ ಹಕ್ಕುಗಳು ಕರ್ನಾಟಕಕ್ಕೆ ಇವೆ. ರಾಜ್ಯದ ಜನರ ಹಿತವನ್ನು ರಕ್ಷಿಸಲು ಯೋಜನೆಯನ್ನು ಶೇಕಡ 100ರಷ್ಟು ಜಾರಿಗೊಳಿಸಲಾಗುವುದು ರಾಜ್ಯ ಸರ್ಕಾರದ ಈ ಮನವಿಯನ್ನು ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಪರಿಗಣಿಸಬೇಕು ಎಂದು ಅವರು ತಿಳಿಸಿದರು.
Related Articles
Advertisement
ಮೇಕೆದಾಟು ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತದೆ ಎಂಬ ವಿಶ್ವಾಸ ನನಗಿದೆ. ಈ ಯೋಜನೆಯನ್ನು ಶೇ. ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ.
– ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು.