ಕನಕಪುರ / ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದು, ಸಿದ್ದರಾಮಯ್ಯ ಪಾದಯಾತ್ರೆ ಬಿಟ್ಟು ಬೆಂಗಳೂರಿಗೆ ವಾಪಾಸಾಗಿದ್ದಾರೆ.
ತಮಿಳುನಾಡು ಗಡಿಭಾಗದ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಸಂಗಮದಲ್ಲಿ ಇಂದು ಪಾದಯಾತ್ರೆ ಕಾರ್ಯಕ್ರಮ ಆರಂಭಗೊಂಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಹಿರಿಯ ಹಲವು ಮುಖಂಡರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಹಿಳಾ ಪ್ರತಿನಿಧಿಗಳು, ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಇದನ್ನೂ ಓದಿ:ಶಿವಕುಮಾರ್ ದಾಟಲಿಲ್ಲ, ಮೇಕೆಯಾದರೂ ದಾಟಲಿ: ಡಿಕೆಶಿ ಜಾರಿದ್ದಕ್ಕೆ ಬಿಜೆಪಿ ಲೇವಡಿ
ಸಿದ್ದರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡ ಬಗ್ಗೆ ಟ್ವೀಟ್ ಮಾಡಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, “ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ. ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು.” ಎಂದು ಬರೆದುಕೊಂಡಿದ್ದಾರೆ.