Advertisement

ಜನರೊಂದಿಗೆ ದರ್ಪದ ವರ್ತನೆ ತೋರುತ್ತಿರುವ ಮೇಲಿನ ಕುರುವಳ್ಳಿ ಪಿಡಿಒ ವರ್ಗಾವಣೆಗೆ ಆಗ್ರಹ

05:43 PM Feb 08, 2023 | Team Udayavani |

ತೀರ್ಥಹಳ್ಳಿ: ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ನೀರು ಸರಬರಾಜು ಇಲ್ಲದೆ ಮತ್ತು ಗ್ರಾಮ ಪಂಚಾಯಿತಿಯಲ್ಲಿ ಕಳೆದ ಆರು ತಿಂಗಳಿನಿಂದ ಗ್ರಾಮ ಸಭೆ, ವಾರ್ಡ್ ಸಭೆ, ಸಾಮಾನ್ಯ ಸಭೆಯು ನಡೆಸದೆ ಪಂಚಾಯಿತಿ ಪಿಡಿಒ ಸರಿತ ಎಂಬುವವರು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದೆ ಇದ್ದ ಕಾರಣ ಗ್ರಾಮ ಪಂಚಾಯಿತಿಗೆ ಮಾಜಿ ಉಪಾಧ್ಯಕ್ಷರದ ಶ್ರೀಮತಿ ಗೀತಾ ರಾಘವೇಂದ್ರ ಇವರ ನೇತೃತ್ವದಲ್ಲಿ ನೂರಾರು ಗ್ರಾಮಸ್ಥರು ಮತ್ತು ವಿಠಲ ನಗರದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದು ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದೇ ಅಧಿಕಾರ ದರ್ಪ ತೋರುತ್ತಿರುವ ಪಿಡಿಓ ಅವವರನ್ನು ವರ್ಗಾವಣೆ ಮಾಡುವಂತೆ ಮಾಜಿ ಉಪಾಧ್ಯಕ್ಷ ರಾದ ಶ್ರೀಮತಿ ಗೀತಾ ರಾಘವೇಂದ್ರ ಸೇರಿದಂತೆ ನೂರಾರು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

Advertisement

ಸ್ಥಳೀಯವಾದ ಯಾವುದೇ ಸಮಸ್ಯೆಗಳಿಗೆ ಅಭಿವೃದ್ಧಿ ಅಧಿಕಾರಿ ಸ್ಪಂದಿಸುತ್ತಿಲ್ಲ, ಯಾವುದೇ ಸಮಸ್ಯೆ ಕೇಳುವುದಕ್ಕೆ ಬಂದರೆ ಸೌಜನ್ಯದಿಂದ ವರ್ತಿಸುವುದಿಲ್ಲ, ಯಾವುದೇ ಸಮಸ್ಯೆಗಳು ಆಲಿಸುವುದಿಲ್ಲ, ಸಮಸ್ಯೆ ಇರುವ ಸ್ಥಳಕ್ಕೆ ಬರುವುದಿಲ್ಲ ತಕ್ಷಣ ಪ್ರತಿಭಟನ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಬರಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿದ್ದು ವಿಷಯ ತಿಳಿದು ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗಳು ಬಂದಿದ್ದು ಗ್ರಾಮಸ್ಥರ ಸಮಸ್ಯೆ ಆಲಿಸಿ ತಕ್ಷಣ ಸಮಸ್ಯೆ ಇತ್ಯರ್ಥ ಮಾಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದೆ ಪಡೆದುಕೊಳ್ಳಲಾಯಿತು.

ಇದನ್ನೂ ಓದಿ: ವಂದನಾ ನಿರ್ಣಯ; ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ ಪ್ರಧಾನಿ ಮೋದಿ

Advertisement

Udayavani is now on Telegram. Click here to join our channel and stay updated with the latest news.

Next