Advertisement

Melkar; ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಆರೋಪ

05:15 PM Aug 12, 2024 | Team Udayavani |

ಬಂಟ್ವಾಳ: ಮಳೆ ಬಂದರೆ ಕೆಸರು, ಮಳೆ ನಿಂತರೆ ಧೂಳು…. ಇದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾದಂದಿನಿಂದ ನಡೆದು ಬಂದ ಹಾದಿ…ಇನ್ನೂ ಕಾಮಗಾರಿ ಮುಗಿಯುವವರೆಗೂ ತಪ್ಪಿದ್ದಲ್ಲ.

Advertisement

ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿ ಮಾತು ತಪ್ಪಿದರೂ ಇಲ್ಲಿನ ಸಮಸ್ಯೆ ಮಾತ್ರ ತಪ್ಪಿಲ್ಲ…ನಿತ್ಯ ನಿರಂತರವಾಗಿ ಕಳೆದ ಅನೇಕ ವರ್ಷಗಳಿಂದ ಸಮಸ್ಯೆಯಿಂದ ಬಳಲಿ ರೊಚ್ಚಿಗೆದ್ದ ಸಾರ್ವಜನಿಕರು ಕಂಪೆನಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಿದ ಘಟನೆ ಅ.12 ರಂದು ಸೋಮವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೆಲ್ಕಾರಿನಲ್ಲಿ ನಡೆದಿದೆ.

ಮಂಗಳೂರು-ಬೆಂಗಳೂರು ಜೊತೆಗೆ ಕೊಣಾಜೆ ಯೂನಿವರ್ಸಿಟಿ ಸಂಪರ್ಕದ ಕೇಂದ್ರ ಸ್ಥಾನವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮೆಲ್ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ನಿತ್ಯ ಗೋಳು ತಪ್ಪಿದ್ದಲ್ಲ. ಮಳೆ ಬಂದರೆ ಕೆಸರು ತುಂಬಿದರೆ, ಮಳೆ ನಿಂತರೆ ಧೂಳು ಸಮಸ್ಯೆ . ಇದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳಲು ಕಂಪೆನಿ ವಿಫಲವಾದ ಹಿನ್ನೆಲೆಯಲ್ಲಿ ,ತಾಳ್ಮೆಯನ್ನು ಕಳೆದಕೊಂಡ ಇಲ್ಲಿನ ವ್ಯಾಪಾರಸ್ಥರು, ಅಂಗಡಿ ಮಾಲಕರು, ಮತ್ತು ಸಾರ್ವಜನಿಕರು ಒಮ್ಮತದಿಂದ ಕಂಪೆನಿಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ.

ಮಳೆಗಾಲದಲ್ಲಿ ಹೊಂಡಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ಸಂಚಾರ ಮಾಡುವಂತಿಲ್ಲ ,ಇದು ಒಂದು ಭಾಗವಾದರೆ, ಇಲ್ಲಿನ ಅಂಗಡಿಗಳಿಗೆ , ಪಾದಾಚಾರಿಗಳಿಗೆ ಹಾಗೂ ಬೈಕ್ ಸವಾರರ ಮೇಲೆ ಗುಂಡಿಯ ಕೆಸರು ನೀರು ಎರಚಿ ಕೆಸರುನೀರಿನ ಸ್ನಾನ ಮಾಡಿಸಿದ ಕಂಪೆನಿಯ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಎರಡು ದಿನಗಳಿಂದ ಮಳೆ ನಿಂತ ಪರಿಣಾಮ ಮಣ್ಣು ಮಿಶ್ರಿತ ರಸ್ತೆಯಲ್ಲಿ ಧೂಳು ಏಳುತ್ತಿದ್ದು ಅಂಗಡಿ ಮಾಲಕರು ವ್ಯಾಪಾರ ಮಾಡುವಂತಿಲ್ಲ,ಹತ್ತಿರದ ಮನೆಯವರು ವಾಸ ಮಾಡುವಂತಿಲ್ಲ. ನಿತ್ಯ ಧೂಳಿನಿಂದ ಸ್ಥಳೀಯ ನಿವಾಸಿಗಳು ಕೆಮ್ಮು ಸಹಿತ ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗುವ ಸಾಧ್ಯತೆಗಳಿವೆ ಎಂದು ಸಾರ್ವಜನಿಕರು ಆಳಲು ವ್ಯಕ್ತಪಡಿಸಿದ್ದಾರೆ.

Advertisement

ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟವಾದ ದಿನದಂದು ಸಮಸ್ಯೆ ಬಗೆಹರಿಸುವ ಬಗ್ಗೆ ಮಾತು ಕೊಟ್ಟ ಬಳಿಕವೇ ತಡೆದ ವಾಹನಗಳನ್ನು ಹೋಗಲು ಬಿಡುವುದು ಎಂಬ ತಾಕೀತು ಹಾಕಿದ್ದರು.

ಕೊನೆಗೆ ಕಂಪೆನಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಒಂದು ವಾರದೊಳಗೆ ಅಂದರೆ ಅ.18 ರಂದು ಸೋಮವಾರದ ಬಳಿಕ ಮೆಲ್ಕಾರಿನಲ್ಲಿ ರಸ್ತೆಗೆ ಡಾಮರು ಹಾಕಿ ಸಮಸ್ಯೆ ನಿವಾರಣೆಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ವ್ಯಾಪಾರ ಕೇಂದ್ರವಾಗಿ ಬೆಳೆಯುತ್ತಿರುವ ಮೆಲ್ಕಾರಿನಲ್ಲಿ ಅವೈಜ್ಞಾನಿಕ ಮಾದರಿಯಲ್ಲಿ ಅಂಡರ್ ಪಾಸ್ ಮಾಡಿ ಇಲ್ಲಿನ ವ್ಯಾಪರಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂಬ ಆರೋಪವನ್ನು ಈ ಹಿಂದೆ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next