ಬಂಟ್ವಾಳ: ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ನಡೆದಿದೆ.
Advertisement
ಬೆಳ್ತಂಗಡಿ ಮೂಲದ ವಿಜಿತ್ ಮೃತಪಟ್ಟ ಯುವಕ.
ತೆಲಂಗಾಣದ ರಿಜಿಸ್ಟರ್ ನ ಇಸುಝು ಕಂಪೆನಿಯ ಜೀಪ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ಬಂಟ್ವಾದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದೆ ಎನ್ನಲಾಗಿದೆ.
Related Articles
ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತಪಟ್ಟಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ.
Advertisement