Advertisement

SMMH; ಹುಡುಗಿಯ ಕಣ್ಣಲ್ಲಿ ಪ್ರೇಮಗೀತೆ; ಸ್ವಾತಿ ಮುತ್ತಿನ ಮಳೆ ಹನಿಯೇ ಮೊದಲು ಹಾಡಿನ ಸದ್ದು

02:43 PM Nov 09, 2023 | Team Udayavani |

“ಟೋಬಿ’ ಸಿನಿಮಾದ ಬಳಿಕ ನಟ ಕಂ ನಿರ್ದೇಶಕ ರಾಜ್‌ ಬಿ. ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಬಿಡುಗಡೆಗೆ ತಯಾರಾಗಿದೆ. ಇದೇ ನವೆಂಬರ್‌ 24ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು, ಸದ್ಯ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ “ಮೆಲ್ಲಗೆ…’ ಎಂಬ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

Advertisement

“ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌’ ಮೂಲಕ ನಟಿ ರಮ್ಯಾ ಇದೇ ಮೊದಲ ಬಾರಿಗೆ ನಿರ್ಮಿಸುತ್ತಿರುವ “ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ “ಲೈಟರ್‌ ಬುದ್ಧ ಫಿಲಂಸ್‌’ ಸಹಯೋಗದೊಂದಿಗೆ ನಿರ್ಮಾಣವಾಗಿದೆ. ಇನ್ನು ಬಿಡುಗಡೆಯಾಗಿರುವ “ಮೆಲ್ಲಗೆ…’ ಎಂಬ ಹಾಡಿಗೆ ಮಿಥುನ್‌ ಮುಕುಂದನ್‌ ಸಂಗೀತ ಸಂಯೋಜಿಸಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದಾರೆ. ಪೃಥ್ವಿ ಈ ಗೀತೆಗೆ ಸಾಹಿತ್ಯ ಬರೆದಿದ್ದಾರೆ.

ಈ ಹಾಡಿನ ಕುರಿತು ಮಾತನಾಡುವ ನಿರ್ದೇಶಕ ರಾಜ್‌ ಶೆಟ್ಟಿ, “ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು. ಈ ಪ್ರೀತಿಯನ್ನು ಮಹಿಳೆಯರು ಹೇಗೆ ಅನುಭವಿಸುತ್ತಾರೆ ಎನ್ನುವುದು ಬೇಕಾಗಿತ್ತು. ಹಾಗಾಗಿ, ಮಂಗಳೂರಿನಲ್ಲಿ ಓದುತ್ತಿರುವ ಪೃಥ್ವಿ ಅವರಿಂದಲೇ ಈ ಹಾಡು ಬರೆಸಲಾಗಿದೆ. ಈ ಹಾಡಿನಲ್ಲಿ ಶಾಸ್ತ್ರೀಯ ಸಂಗೀತದ ಸ್ಪರ್ಶವಿದೆ’ ಎನ್ನುತ್ತಾರೆ.

“ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ರಾಜ್‌ ಮತ್ತು ಸಿರಿ ರವಿಕುಮಾರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಉಳಿದಂತೆ ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಜೆ. ಪಿ. ತುಮ್ಮಿನಾಡು, ಸ್ನೇಹ ಶರ್ಮಾ ಮುಂತಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇನ್ನು ಸ್ವತಃ ಹಿನ್ನೆಲೆ ಗಾಯಕಿಯೂ ಆಗಿರುವ ನಾಯಕಿ ಸಿರಿ ರವಿಕುಮಾರ್‌ ಕೂಡ ಈ ಹಾಡಿನ ಅಭಿಮಾನಿಯಾಗಿದ್ದು, ಹಾಡನ್ನು ಪದೇಪದೇ ಕೇಳುತ್ತಿರುವುದಾಗಿ ಹೇಳಿಕೊಳ್ಳುತ್ತಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next