Advertisement

BREAKING: ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ

02:39 PM Nov 09, 2021 | Team Udayavani |

ಬೆಂಗಳೂರು: ರಾಜ್ಯದ 25 ವಿಧಾನ ಪರಿಷತ್ ಸ‍್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

Advertisement

ಕರ್ನಾಟಕ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಡಿ.10 ರಂದು ಚುನಾವಣೆ ನಡೆಯಲಿದ್ದು, ಡಿ.14 ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ನವೆಂಬರ್ 23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನವೆಂಬರ್ 24 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು ಮತ್ತು ನವೆಂಬರ್ 26 ರೊಳಗೆ ನಾಮಪತ್ರ ಹಿಂಪಡೆಯಲು ಅವಕಾಶವಿರುತ್ತದೆ. ಡಿ.10 ರಂದು ಬೆಳಿಗ್ಗೆ 8 ರಿಂದ ಸಂಜೆ 4 ವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next