ಮ್ಯೂನಿಚ್ : ಪ್ರಧಾನಿ ನರೇಂದ್ರ ಮೋದಿ ಅವರು 2 ದಿನಗಳ ಜರ್ಮನಿ ಪ್ರವಾಸದಲ್ಲಿದ್ದು, ಜಿ-7 ಶೃಂಗಸಭೆಯಲ್ಲಿ ವಿಶ್ವ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
Advertisement
ಜರ್ಮನಿಯ ಮ್ಯೂನಿಚ್‌ಗೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭಾರತೀಯರು ಧ್ವಜಗಳನ್ನು ಹಿಡಿದು ಆತ್ಮೀಯವಾಗಿ ಸ್ವಾಗತಿಸಿದರು. ಪುಟ್ಟ ಮಕ್ಕಳೂ ಸೇರಿದಂತೆ ಹಲವರು ಆಟೋಗ್ರಾಫ್ ಪಡೆದರು.
ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಮ್ಯೂನಿಚ್‌ಗೆ ಬಂದಿಳಿದಿದ್ದು. ಶೃಂಗಸಭೆಯಲ್ಲಿ ವಿಶ್ವ ನಾಯಕರೊಂದಿಗೆ ಫಲಪ್ರದ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.