Advertisement
ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಪ್ರಸನ್ನಕುಮಾರ್ ಮಾತನಾಡಿ, ಅಧಿಕಾರಿಗಳು ಚುನಾಯತ ಪ್ರತಿನಿಧಿಗಳ ಕರೆಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು. ಮಧ್ಯಾಹ್ನ 12 ಗಂಟೆಗೂ ಕರೆ ಸ್ವೀಕರಿಸೊಲ್ಲ. ಸಂಜೆ 5 ಗಂಟೆಗೆ ಫೋನ್ ಸ್ವಿಚ್ ಆಫ್ ಆಗಿರುತ್ತೆ ಎಂದರು. ಹಿರಿಯ ಅಧಿಕಾರಿಗಳಿಗೆ ವಿಚಾರ ತಿಳಿಸಿದರೂ ಯಾವ ಕ್ರಮಗಳನ್ನೂ ಕೈಗೊಳ್ಳುತ್ತಿಲ್ಲ ಎಂದರು.
ಆರೋಗ್ಯ ಇಲಾಖೆ ಡಿಎಚ್ಒ ಡಾ.ಅಮರನಾಥ್, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ಅವುಗಳನ್ನು ತಡೆಗಟ್ಟಲು ಇಲಾಖೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಟೆಂಡರ್ ಪೂರ್ಣವಾಗಿಲ್ಲ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಗಂಗಾ ಕಲ್ಯಾಣ ಯೋಜನೆಯಡಿ 179 ಕೊಳವೆ ಬಾವಿಗಳನ್ನು ಕೊರೆಯಲು ಇನ್ನೂ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿಲ್ಲ ಎಂದರು. ಟೆಂಡರ್ ಪ್ರಕ್ರಿಯೆ ಮೊದಲು ಡೀಸಿಗಳ ಹಂತದಲ್ಲಿ ನಡೆಯುತ್ತಿತ್ತು. ಇದೀಗ ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವುದೇ ವಿಳಂಬಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದರು.
ಪ್ರವಾಸೋದ್ಯಮ ಇಲಾಖೆ ಮೂಲಕ ಸರ್ಕಾರ ಟ್ಯಾಕ್ಸಿ ಯೋಜನೆಯಡಿ 2017-18ನೇ ಸಾಲಿಗೆ 35 ಗುರಿ ನೀಡಿದ್ದು ಈಡೇರಿದೆ. 2018-19ನೆ ಸಾಲಿಗೆ 23 ಗುರಿ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. 2019-20ನೇ ಸಾಲಿಗೆ 14 ಗುರಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಎನ್.ಸುಗುಣ, ಶಂಕರ್, ಜಿಪಂ ಅಧಿಕಾರಿಗಳು ಉಪಸ್ಥಿತರಿದ್ದರು.
ಮಧ್ಯಮಾವಧಿ ತಳಿಗಳ ಬೀಜ ಬಿತ್ತನೆ ಮಾಡಿ:
ಕೃಷಿ ಇಲಾಖೆ ಪ್ರಗತಿ ಚರ್ಚೆಗೆ ಬಂದಾಗ ಮಾತ ನಾಡಿದ ಕೃಷಿ ಅಧಿಕಾರಿಗಳು ಜಿಲ್ಲೆಯಲ್ಲಿ ಈ ಬಾರಿ 203 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದರಿಂದ ಶೇ.51 ರಷ್ಟು ಬಿತ್ತನೆಯಾಗಿದೆ. ಕನಕಪುರದಲ್ಲಿ ಅತಿ ಕಡಿಮೆ ಬಿತ್ತನೆಯಾಗಿದೆ. 5 ದಿನಗಳಿಂದ ಜಿಲ್ಲೆಯಲ್ಲಿ ಉತ್ತ ಮವಾಗಿ ಮಳೆಯಾಗುತ್ತಿದೆ. ರೈತರು ಈಗಲೂ ಮಧ್ಯ ಮಾವಧಿ ತಳಿಗಳನ್ನು ಬಿತ್ತನೆ ಮಾಡಬಹುದು. ಶೂನ್ಯ ಬಂಡವಾಳ ನೈಸರ್ಗಿಕ ಕೃಷಿಯನ್ನು ಕ್ಲಸ್ಟರ್ ಮಟ್ಟದಲ್ಲಿ ಚನ್ನಪಟ್ಟಣದ ಮೂರು ಹಳ್ಳಿಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಸಿರಿ ಧಾನ್ಯ ಬೆಳೆಯಲು 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಈಗಾಗಲೇ 180 ಹೆಕ್ಟೇರ್ ಪ್ರದೇಶದಲ್ಲಿ ರೈತರು ಸಿರಿಧಾನ್ಯ ಬೆಳೆಯಲು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಆ.31ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕೃಷಿ ಅಧಿಕಾರಿಗಳು ಮಾಹಿತಿ ನೀಡಿದರು.