Advertisement

ಮೇನಕಾರಿಂದ ಕೋಮು ಸೌಹಾರ್ದತೆಗೆ ಧಕ್ಕೆ

08:51 PM Apr 13, 2019 | Team Udayavani |

ಬಾಗೇಪಲ್ಲಿ: ಮುಸ್ಲಿಮರು ತಮಗೆ ಮತ ಹಾಕದಿದ್ದರೆ ಅವರ ಕೆಲಸ ಮಾಡಲು ಯೋಚನೆ ಮಾಡಬೇಕಾಗುತ್ತದೆ ಎಂದು ಉತ್ತರ ಪ್ರದೇಶದ ಸುಲ್ತಾನ್‌ಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೇನಕಾಗಾಂಧಿ ಮುಸ್ಲಿಮರಿಗೆ ಬೆದರಿಕೆ ಹಾಕಿರುವುದು ಖಂಡನೀಯ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಎಂ.ವೀರಪ್ಪಮೊಯ್ಲಿ ಪುತ್ರಿ ರಷ್ಮಿ ಮೊಯ್ಲಿ ಹೇಳಿದರು.

Advertisement

ಪಟ್ಟಣದಲ್ಲಿ ಶನಿವಾರ ಮನೆ ಮನೆಗೂ ತೆರಳಿ ಪ್ರಚಾರ ಮಾಡಿ ಮಾತನಾಡಿದ ಅವರು, ಮೇನಕಾಗಾಂಧಿಯವರ ಹೇಳಿಕೆ ಕೇಳಿ ಬೇಸರವಾಗಿದೆ. ಕೇಂದ್ರ ಸಚಿವೆಯಂತಹ ಉನ್ನತ ಸ್ಥಾನದಲ್ಲಿರುವ ಅವರು ಇಂತಹ ಹೇಳಿಕೆ ನೀಡುವುದರಿಂದ ದೇಶದಲ್ಲಿ ಕೋಮು ಸೌಹಾರ್ದತೆ ಕೆಡುತ್ತದೆ ಎಂದರು.

ಮೋದಿ ಸರ್ಕಾರದಲ್ಲಿ ಇಂತಹ ಬೆದರಿಕೆ ಸಾಮಾನ್ಯವಾಗಿವೆ. ಈ ರೀತಿ ಬೆದರಿಕೆ ಹಾಕಿದವರನ್ನು ಚುನಾವಣೆಯಲ್ಲಿ ಸೋಲಿಸಲೇಬೇಕಾಗಿದೆ. ವಾಯುಸೇನೆ ಪಾಕಿಸ್ತಾನದ ಬಾಲಕೋಟ್‌ನ ಉಗ್ರರ ಶಿಬಿರಗಳ ಮೇಲೆ ಸೈನಿಕರ ನಡೆಸಿದ ಪರಾಕ್ರಮವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.

ಬಿಜೆಪಿಯವರಿಗೆ ತಮ್ಮ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಾಗಿ ಸೇನೆಯ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂಂದು ಆರೋಪಿಸಿದರು. ಇದಕ್ಕೂ ಮೊದಲು ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಚಾರಕ್ಕೆ ಚಾಲನೆ ನೀಡಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ನರೇಂದ್ರ,ಪುರಸಭೆ ಮಾಜಿ ಅಧ್ಯಕ್ಷೆ ಮಮತ, ಭೂ ಅಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ಪಾವಜೇನಹಳ್ಳಿ ನಾಗರಾಜರೆಡ್ಡಿ, ಮಹಿಳಾ ಘಟಕ ಕಾಂಗ್ರೆಸ್‌ ಅಧ್ಯಕ್ಷೆ ಟಿ.ವಿ.ಸುಮಂಗಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರಬೇಗಂ, ಪುರಸಭೆ ಮಾಜಿ ಸದಸ್ಯೆ ಶಬಾನ, ಯುವ ಕಾಂಗ್ರೆಸ್‌ ಅಧ್ಯಕ್ಷ ಸೋಮಶೇಖರ್‌, ಗ್ರಾಪಂ ಮಾಜಿ ಸದಸ್ಯ ಎಂ.ಎನ್‌.ವೆಂಕಟೇಶ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next