Advertisement

Rescue: 96 ಗಂಟೆಗಳ ಕಾಲ ಸುರಂಗದೊಳಗೆ ಬಂಧಿಯಾದ ಕಾರ್ಮಿಕರು, ಕಾರ್ಯಾಚರಣೆ ಮುಂದುವರಿಕೆ

09:21 AM Nov 16, 2023 | sudhir |

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಸಿಲುಕಿರುವ 40 ಕಾರ್ಮಿಕರನ್ನು ಸ್ಥಳಾಂತರಿಸುವ ರಕ್ಷಣಾ ಕಾರ್ಯಾಚರಣೆ ಇಂದು 5 ನೇ ದಿನಕ್ಕೆ ಕಾಲಿಟ್ಟಿದೆ.

Advertisement

ಘಟನೆ ನಡೆದ್ದು ಇಂದಿದೆ ಐದು ದಿನಗಳಾಗುತ್ತಿದ್ದು ಸುಮಾರು 96 ಗಂಟೆಗಳ ಕಾಲ ಕಾರ್ಮಿಕರು ಸುರಂಗದೊಳಗೆ ಬಂಧಿಯಾದಂತಾಗಿದೆ.

ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು ಈ ನಡುವೆ ಬುಧವಾರ ಕುಸಿದ ಸುರಂಗದ ಪ್ರದೇಶದಲ್ಲಿ ಮತ್ತೆ ಭೂ ಕುಸಿತ ಸಂಭವಿಸಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಈಗ ಮತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗದ ಒಳಗೆ ಸಿಕ್ಕಿಬಿದ್ದ ಜನರನ್ನು ರಕ್ಷಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಆಗರ್ ಡ್ರಿಲ್ ಯಂತ್ರವನ್ನು ಅಳವಡಿಸಲಾಗುತ್ತಿದೆ. ಸಿಕ್ಕಿಬಿದ್ದ ಕಾರ್ಮಿಕರಿಗೆ ಆಹಾರ ಮತ್ತು ಔಷಧಗಳ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗುತ್ತಿದ್ದು ಅವರ ಜೊತೆ ನಿರಂತರ ಸಂವಹನ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಸುರಂಗ ಇರುವ ಪರ್ವತಗಳ ದುರ್ಬಲ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಮಿಕರ ರಕ್ಷಣೆಗಾಗಿ ಥಾಯ್ಲೆಂಡ್ ಮತ್ತು ನಾರ್ವೆಯ ತಜ್ಞರ ತಂಡಗಳ ಸಹಾಯವನ್ನೂ ತೆಗೆದುಕೊಳ್ಳಲಾಗುತ್ತಿದೆ. ಈಗ 50 ಮೀಟರ್‌ಗಿಂತಲೂ ಹೆಚ್ಚು ಉದ್ದದ ತ್ಯಾಜ್ಯದ ನಡುವೆ 800 ಎಂಎಂ ವ್ಯಾಸದ ಪೈಪ್‌ಗಳನ್ನು ಹಾಕಲಾಗುತ್ತಿದೆ. ಅವಶೇಷಗಳಿಗೆ ಅಡ್ಡಲಾಗಿ ಉಕ್ಕಿನ ಪೈಪ್‌ಗಳನ್ನು ಹಾಕಿ ಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರತರುವ ಪ್ರಯತ್ನ ನಡೆಯುತ್ತಿದೆ.

Advertisement

ಇದನ್ನೂ ಓದಿ: Uttar Pradesh: ವೈಶಾಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, 19 ಮಂದಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next