ಚನ್ನರಾಯಪಟ್ಟಣ: ಆಧುನಿಕತೆ ಬೆಳೆದಂತೆ ವಿದ್ಯುನ್ಮಾನ ವಸ್ತುಗಳ ಬಳಕೆ ಹೆಚ್ಚುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆಯೂ ಹೆಚ್ಚುತ್ತಿದೆ ಪ್ರಧಾನ ಸಿವಿಲ್ ನ್ಯಾಯಾಧೀಶ ಎಸ್.ಚಿನ್ನಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆಧುನಿಕ ದಿನಗಳಲ್ಲಿ ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿದೆ. ವಿದ್ಯಾರ್ಥಿಗಳು ಮತ್ತು ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಮೊಬೈಲ್ ಬಳಕೆ ಮಾಡುತ್ತಿರುವುದರಿಂದ ಮಾನಸಿಕ ಖನ್ನತ್ತೆಗೆ ಒಳಗಾಗುತ್ತಿದ್ದಾರೆ ಎಂದರು.
ಖಿನ್ನತೆಯಿಂದ ಆತ್ಮಹತ್ಯೆ: ಮಾನಸಿಕ ಖಿನ್ನತೆಗೆ ಒಳಗಾದವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಮಾನಸಿಕ ಖಿನ್ನತೆಯಿಂದ ಬಳಲುವವರು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಮನೋರೋಗಿಗಳನ್ನು ಪತ್ತೆ ಹೆಚ್ಚಿ ಚಿಕಿತ್ಸೆ ಕೊಡಿಸಬೇಕಿದೆ. ಪೋಷಕರು ತಮ್ಮ ಮಕ್ಕಳನ್ನು ಒಂಟಿಯಾಗಿ ಬಿಡುವುದು ಹಾಗೂ ಆಧುನಿಕ ವಸ್ತುಗಳಿಗೆ ಅಂಟಿಕೊಳ್ಳದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದರು.
ವಕೀಲ ಸಂಘದ ಅಧ್ಯಕ್ಷ ಧರ್ಮಪ್ಪ ಮಾತನಾಡಿ, ಭಾರತದಲ್ಲಿ ಶೇ.80ರಷ್ಟು ಆತ್ಮಹತ್ಯೆಗಳು ಆಗುತ್ತಿರುವುದು ಮಾನಸಿಕ ಖಿನ್ನತೆಗೆ ಒಳಗಾದವರಿಂದ ಮಾನರೋಗಿಗಳಿಗೆ ಔಷಧಿ ಅಗತ್ಯವಿಲ್ಲ. ಅವರನ್ನು ತಪಾಸಣೆ ಮಾಡಿ ಮಾನಸಿಕ ಧೈರ್ಯ ತುಂಬಬೇಕು. ವಿದ್ಯಾರ್ಥಿಗಳಲ್ಲಿ ಹೆಚ್ಚು ಮಾನಸಿಕ ರೋಗಗಳು ಕಂಡು ಬರುತ್ತಿವೆ. ಅವರಿಗೆ ಎದುರಾಗುವ ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಲಾಗಿದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ನುಡಿದರು.
ಆಪ್ತ ಸಮಾಲೋಚನೆ ನಡೆಸಿ: ಒತ್ತಡ, ಭಯ, ಬೇಸರ, ಕೀಳರಿಮೆ, ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆ. ಹೀಗೆ ನಕರಾತ್ಮಕ ಆಲೋಚನೆಗಳು ಎರಡು ವಾರಕ್ಕಿಂತ ಹೆಚ್ಚಾಗಿ ಕಂಡುಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಆಪ್ತ ಸಮಾಲೋಚನೆ ಮೂಲಕ ಮಾನಸಿಕ ಖಿನ್ನತೆಯನ್ನು ದೂರಮಾಡಬಹುದು, ನಾವು ಮಹಾತ್ಮರಾಗಲು ಸಾಧ್ಯವಿಲ್ಲ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡರೆ ಆರೋಗ್ಯ ಉತ್ತಮವಾಗಿ ಇರುತ್ತದೆ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪಾ ಮಾತನಾಡಿ, ಮಾನಸಿಕ ಆರೋಗ್ಯ ದೈಹಿಕ ಆರೋಗ್ಯಕ್ಕಿಂತ ಉತ್ತಮವಾಗಿ ಇರಬೇಕು. ಮನಸ್ಸು ಸದೃಢವಾಗಿ ಬದುಕಿನಲ್ಲಿ ಎದುರಾಗು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು.ತಾಳ್ಮೆ ಎಲ್ಲರಿಗೂ ಅಗತ್ಯವಿದೆ. ದುಡುಕಿನ ನಿರ್ಧಾರದಿಂದ ಅನೇಕ ಸಮಸ್ಯಗಳನ್ನು ತಂದುಕೊಳ್ಳಬೇಕಾಗುತ್ತದೆ. ಸಮಾಜದೊಂದಿಗೆ ಬರೆಯುವ ಮೂಲಕ ಮಾಸಿಕವಾಗಿ ಸದೃಡರಾಗಬಹುದು ಎಂದು ಸಲಹೆ ನೀಡಿದರು.
ಮಾನಸಿಕ ಆರೋಗ್ಯ ತಜ್ಞೆ ಡಾ.ಸುನೀತಾ, ಸಹಾಯಕ ಅಭಿಯೋಜಕ ಹರೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಡಾ.ಎಂ.ಎನ್.ಲೋಕೇಶ ಮೊದಲಾದವರು ಉಪಸ್ಥಿತರಿದ್ದರು.