ರಾಮನಗರ: ಮಾನಸಿಕ ರೋಗಿಗಳಿಗೂ ಕಾನೂನು ಇದೆ. ಹೀಗಾಗಿ ಜನಸಾಮಾನ್ಯರಲ್ಲಿ ಈ ವಿಚಾರದ ಬಗ್ಗೆ ತಿಳಿವಳಿಕೆ ಮೂಡಿಸಿ ಕಾನೂನುಅವಶ್ಯಕತೆ ಇದ್ದರೆ ಪ್ರಾಧಿಕಾರದ ಗಮನಕ್ಕೆ ತರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ.ವೆಂಕಟಪ್ಪ ತಿಳಿಸಿದರು.
ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ “ಸದೃಢ ಮಾಸಿಕ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ’ ಎಂಬ ಘೋಷಣೆಯೊಡನೆ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಮಾನಸಿಕ ಆರೋಗ್ಯ ದಿನ ಉದ್ಘಾಟಿಸಿ ಮಾತನಾಡಿದರು. ಮಾನಸಿಕ ರೋಗಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡುವುದರ ಮೂಲಕ ಅಂತಹ ರೋಗಿಗಳಿಗೂ ನ್ಯಾಯ ಒದಗಿಸಬೇಕು ಎಂದರು.
ಆಪ್ತ ಸಮಾಲೋಚನೆ:ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ವಿಭಾಗದಿಂದ ಆಯೋಜಿಸುತ್ತಿರುವ ಶಿಬಿರಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕವಾಗಿ ಕುಗ್ಗಿರುವ ವ್ಯಕ್ತಿಗಳಿಗೆ ಆಪ್ತ ಸಮಾಲೋಚನೆ ನಡೆಸುತ್ತಿರುವುದಾಗಿ, ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡುತ್ತಿರುವು ದಾಗಿ ವಿವರಿಸಿದರು. ಇದೇ ವೇಳೆ ಮಾನಸಿಕ ರೋಗಿಗಳಿಗೆ ಲಭ್ಯವಿರುವ ಆರೋಗ್ಯ ಸವಲತ್ತಿನ ಬಗ್ಗೆ ಕರಪತ್ರ ಬಿಡುಗಡೆ ಮಾಡಿದರು.
ಅಧ್ಯಕ್ಷತೆ ವಹಿಸಿದ್ದ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ವಿ.ಶೈಲೇಂದ್ರ, ಭೌತಿಕ ಆರೋಗ್ಯ ಸಮಸ್ಯೆ ಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದೇವೆ. ಮಾನಸಿಕ ಸಮಸ್ಯೆಗಳ ಬಗ್ಗೆಯೂ ತಿಳಿವಳಿಕೆ ಮೂಡಿಸಿಕೊಂಡು ಆರೋಗ್ಯಇಲಾಖೆಕಾರ್ಯಕ್ರಮದ ಅಧಿಕಾರಿ, ಸಿಬ್ಬಂದಿಯೊಂದಿಗೆ ಮುಕ್ತವಾಗಿ ವಿನಿಮಯ ಮಾಡಿಕೊಂಡರೆ ಉತ್ತಮ ಜೀವನ ನಡೆಸಲು ಸಾಧ್ಯವಿದೆ ಎಂದರು.
ಮನೋರೋಗ ತಜ್ಞ ಡಾ.ಆದರ್ಶ ಉಪನ್ಯಾಸ ನೀಡಿ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣ ಮತ್ತು ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು. ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರನ್ನು ಪತ್ತೆ ಹಚ್ಚುವುದುಹೇಗೆ,ಪೂರ್ಣಚಿಕಿತ್ಸೆಮಹತ್ವ,ಯೋಗ, ಧ್ಯಾನಗಳಿಂದಾಗುವ ಲಾಭ, ಇತ್ಯಾದಿ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.
ಆರ್‌ಸಿಎಚ್ ಅಧಿಕಾರಿ ಡಾ.ಪದ್ಮಾ, ಡಿಎಸ್‌ಒಡಾ.ಕಿರಣ್ ಶಂಕರ್,ಡಿಟಿಒಡಾ.ಕುಮಾರ,ಡಿವೈಎಸ್ಪಿಗಳಾದ ಗುರುಪ್ರಸಾದ್, ಶ್ರೀನಿವಾಸ್,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್, ಪ್ರಮುಖರಾದ ಪದ್ಮರೇಖಾ, ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ತರಬೇತಿ ಶಾಲೆ ಅಧಿಕಾರಿಗಳು ಇದ್ದರು.