Advertisement

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಚಿಕಿತ್ಸೆ

04:37 PM Sep 19, 2020 | Suhan S |

ಮಂಡ್ಯ: ಮಾನಸಿಕ ರೋಗಿಗಳಿಗೆ ಮೊದಲು ನೆನಪಾಗುವುದು ಬೆಂಗಳೂರಿನ ನಿಮ್ಹಾನ್ಸ್‌. ಆದರೆ, ಬದಲಾದ ಸನ್ನಿವೇಶದಲ್ಲಿ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯಕೇಂದ್ರಗಳಲ್ಲೂ ಮಾನಸಿಕ ರೋಗಕ್ಕೆ ಚಿಕಿತ್ಸೆ ಸಿಗಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ತಿಳಿಸಿದರು.

Advertisement

ನಗರದ ರೋಟರಿ ಶಾಲೆಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸೇವೆ ಗಳು, ಜಿಲ್ಲಾ ಆರೋಗ್ಯ ಸಂಘದಿಂದ ನಡೆದ ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಮಾನಸಿಕ ಆರೋಗ್ಯ ಮತ್ತು ಚಿಕಿತ್ಸೆಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚಿಕಿತ್ಸೆ ತರಬೇತಿ: ಮಾನಸಿಕ ಕಾಯಿಲೆ ಇರುವ ವ್ಯಕ್ತಿಗಳನ್ನು ಮೊದಲೇ ಗುರುತಿಸಿ, ಅವರು ಆತ್ಮಹತ್ಯೆಗೆ ಶರಣಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಚಿಕಿತ್ಸೆ ನೀಡುವ ತರಬೇತಿ ಕಾರ್ಯಕ್ರಮಗಳು ಸಹಾಯಕವಾಗಲಿವೆ. ಮನಸ್ಸಿನ ಒತ್ತಡ ಕಡಿಮೆ ಮಾಡಲು ಮಾನಸಿಕ ಆರೋಗ್ಯದ ಚಿಕಿತ್ಸೆ, ಆಪ್ತ ಸಮಾಲೋಚನೆ ಮೂಲಕ ಸಂಪರ್ಕಿಸಿ, ಮಾನಸಿಕ ವಾಗಿ ತೊಳಲಾಡುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಿದಲ್ಲಿ ಅದರಿಂದ ಹೊರಬಹದು ಎಂದು ಸಲಹೆ ನೀಡಿದರು.

ಕಳೆದ ನಾಲ್ಕು ವರ್ಷಗಳಲ್ಲಿ ಇದ್ದಂತ ಆತ್ಮಹತ್ಯೆ ಪ್ರಕರಣಗಳು ಜಿಲ್ಲೆಯಲ್ಲಿ ಕಡಿಮೆಯಾಗಿವೆ. ರೈತಆತ್ಮಹತ್ಯೆ, ಮಾನಸಿಕ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ  ಕಡಿಮೆಯಾಗಿದೆ. ಇದಕ್ಕೆ ಆರೋಗ್ಯ ಇಲಾಖೆ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆಪ್ತ ಸಮಾಲೋಚನೆಯಲ್ಲಿ ತೊಡಗಿರುವುದೇ ಕಾರಣವಾಗಿದೆ ಎಂದು ಹೇಳಿದರು.

ಎಲ್ಲ ರೀತಿಯ ಸೌಲಭ್ಯ: ಒತ್ತಡದಲ್ಲಿ ಎಲ್ಲರೂ ಕೆಲಸಮಾಡುತ್ತಿರುತ್ತಾರೆ. ಒತ್ತಡವನ್ನು ಕಡಮೆ ಮಾಡಿ ಕೊಳ್ಳುವ ಮೂಲಕ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಆರೋಗ್ಯ ಇ-ಸಂಜೀವಿನಿ ಅÂಪ್‌ ನಲ್ಲಿ ಹೆಸರುಗಳನ್ನು ನೋಂದಾಯಿಸಿಕೊಂಡಲ್ಲಿ ಮನೆ ಬಾಗಿಲಿಗೆ ವೈದ್ಯೋಪಚಾರ ದೊರೆಯುತ್ತದೆ.ಇದರಲ್ಲಿ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಒಳ್ಳೆಯ ಕಾರ್ಯಕ್ರಮವಾಗಿದೆ. ಇಲ್ಲಿ ಎಲ್ಲ ರೀತಿಯ ಸೌಲಭ್ಯಗಳೂ ದೊರೆಯುತ್ತವೆ ಎಂದು ತಿಳಿಸಿದರು.

Advertisement

ಜಿಲ್ಲಾಮಾನಸಿಕಆರೋಗ್ಯಕಾರ್ಯಕ್ರಮಾಧಿಕಾರಿಡಾ.ಕೆ.ಪಿ.ಅಶ್ವತ್ಥ್, ಸಂಪನ್ಮೂಲ ವ್ಯಕ್ತಿ ಡಾ.ಶಶಾಂಕ್‌, ಹಿರಿಯ ವೈದ್ಯಾಧಿಕಾರಿ ಡಾ.ಕೆ.ಎಂ.ಶಿವಕುಮಾರ್‌, ಮಹಮದ್‌ ಸುಹೇಲ್‌, ಗೋವಿಂದರಾಜು, ಚಿಕ್ಕರಸೇಗೌಡ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next