ಗಂಟೆ ಕ್ರೀಡೆಗೆ ಮೀಸಲಿಟ್ಟರೆ ಮಾನಸಿಕ ನೆಮ್ಮದಿ ಪಡೆಯಲು ಸಾಧ್ಯವಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹೇಳಿದರು.
Advertisement
ನಗರದ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಮೈದಾನದಲ್ಲಿ ರವಿವಾರ ನಡೆದ ಜಿಲ್ಲಾ ಪತ್ರಕರ್ತರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪತ್ರಕರ್ತರು ಮತ್ತು ಪೊಲೀಸರು ಹೊಂದಾಣಿಕೆಯಿಂದ ಕೆಲಸ ಮಾಡಿದಾಗ ಸಮಾಜದಲ್ಲಿ ಶಾಂತಿಯ ವಾತಾವರಣ ನಿರ್ಮಾಣ ಮಾಡಲು ಸಾಧ್ಯ ಎಂದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಜವಾಬ್ದಾರಿ ಬಹಳ ಇದೆ. ಕ್ರೀಡಾಕೂಟಗಳು ಇಂಥ ಒತ್ತಡಗಳಿಂದ ಮುಕ್ತಿ ನೀಡಲು, ದೈಹಿಕವಾಗಿ ಸದೃಢರಾಗಲು ಸಹಕಾರಿ ಎಂದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಆಯುಕ್ತ ಮೊಹಮ್ಮದ್ ನಜೀರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಉಡುಪಿ ಜಿಲ್ಲಾ ವಾರ್ತಾಧಿಕಾರಿ ರೋಹಿಣಿ, ಎ.ಜೆ. ಆಸ್ಪತ್ರೆ ವೈದ್ಯ ಡಾ| ವೈ. ಭರತ್ ಶೆಟ್ಟಿ, ಪತ್ರಕರ್ತ ಡಾ| ಯು.ಪಿ. ಶಿವಾನಂದ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕೆ. ಆನಂದ ಶೆಟ್ಟಿ, ಮಂಗಳೂರು ಪ್ರಸ್‌ಕ್ಲಬ್ ಅಧ್ಯಕ್ಷ ಡಾ| ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ
ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ ಉಪಸ್ಥಿತರಿದ್ದರು. ಪತ್ರಕರ್ತ ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.